ಕೇಂದ್ರ ಬಜೆಟ್: ಖರ್ಗೆ, ಉಗ್ರಪ್ಪ ಹೇಳಿದ್ದೇನು?

ಶುಕ್ರವಾರ, 1 ಫೆಬ್ರವರಿ 2019 (14:07 IST)
ಕೇಂದ್ರ ಸರಕಾರ ಮಂಡಿಸಿರುವ ಮಧ್ಯಂತರ ಬಜೆಟ್ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಿಜೆಪಿ ನಾಯಕರನ್ನು ದೂರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಉದ್ದೇಶ ಪೂರ್ವಕವಾಗಿ ಮಾಹಿತಿ ಸೋರಿಕೆ ಮಾಡಿದೆ. ಸಂವಿಧಾನ ಮತ್ತು ಸಂಪ್ರದಾಯಕ್ಕೆ ಕೇಂದ್ರ ಸರ್ಕಾರ ಅಪಚಾರ ಮಾಡಿದೆ. ನೈತಿಕ ಹೊಣೆ ಹೊತ್ತು ಹಣಕಾಸು ಸಚಿವರು ರಾಜೀನಾಮೆ ನೀಡಬೇಕು.  ಹೀಗಂತ ನವದೆಹಲಿಯಲ್ಲಿ ಸಂಸದ ವಿ.ಎಸ್ ಉಗ್ರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಂಬರುವ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟು ಬಜೆಟ್ ಮಂಡನೆ ಮಾಡಲಾಗಿದೆ. ಇದರಿಂದ ಮಧ್ಯಮ ವರ್ಗದವರಿಗೆ ನಿಜವಾಗಲೂ ಅನುಕೂಲ ಆಗುವುದಿಲ್ಲ. ಸರಕಾರ ಕೇವಲ ನಾಲ್ಕು ತಿಂಗಳು ಉಳಿದಿದೆ. ಹೇಗೆ ಬಜೆಟ್ ಅಂಶಗಳನ್ನು ಅನುಷ್ಠಾನಗೊಳಿಸುತ್ತಾರೆ ಎಂದು ಖರ್ಗೆ ಪ್ರಶ್ನಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ