ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರು ಬದಲಾಯಿಸಿಯೇ ತೀರುತ್ತೇನೆ ಎಂದು ಹೊರಟಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗೆ ಕೇಂದ್ರ ಸರ್ಕಾರ ಠಕ್ಕರ್ ಕೊಟ್ಟಿದೆ.
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಲು ಡಿಕೆಶಿ ಯೋಜನೆ ಹಾಕಿದ್ದರು. ಅದರಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ಅದನ್ನೀಗ ಕೇಂದ್ರ ಸರ್ಕಾರ ತಿರಸ್ಕರಿಸಿದ್ದು ಡಿಕೆಶಿ ಆಸೆಗೆ ತಣ್ಣೀರೆರಚಿದೆ.
ಈ ಹಿಂದೆ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡುವ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾಗ ಬಿಜೆಪಿ ಮತ್ತು ಮಿತ್ರ ಪಕ್ಷ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯಂತೂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಇದೀಗ ಕೇಂದ್ರ ಸರ್ಕಾರವೇ ಡಿಕೆ ಶಿವಕುಮಾರ್ ಪ್ರಸ್ತಾವವನ್ನು ತಿರಸ್ಕರಿಸಿದೆ. ಆ ಮೂಲಕ ಹೆಸರು ಬದಲಾವಣೆಗೆ ತಡೆ ನೀಡಿದೆ. ಈ ಭಾಗದ ಜನರ ವಿರೋಧವಿದೆ ಎಂಬ ಕಾರಣ ನೀಡಿ ಕೇಂದ್ರ ಸರ್ಕಾರ ಪ್ರಸ್ತಾವನೆ ತಿರಸ್ಕರಿಸಿದೆ.