ದೇಶದ ಜನತೆಗೆ ಕೆಮದ್ರ ಸರ್ಕಾರ ಗಿಫ್ಟ್ ನೀಡಿದ್ದು, ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಹೌದು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 5 ರೂ. ಕಡಿತ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಕಡಿತಗೊಳಿಸಿ ಆದೇಶಿಸಿದೆ. ಇನ್ನು ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಅನ್ವಯವಾಗಲಿದ್ದು, ಕೇಂದ್ರ ಸರ್ಕಾರ ತೈಲ ಬೆಲೆ ಇಳಿಕೆಗೆ ಮಹತ್ವದ ನಿರ್ಧಾರ ಕೈಗೊಂಡಿದೆ.
ಇನ್ನು ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕ ಕಡಿತ ಹಿನ್ನೆಲೆ, ಪೆಟ್ರೋಲ್, ಡೀಸೆಲ್ ಮೇಲೆ ವ್ಯಾಟ್ ಕಡಿತಕ್ಕೆ ಒತ್ತಾಯಿಸಲಾಗಿದೆ. ಹೌದು ಎಲ್ಲ ರಾಜ್ಯಗಳಿಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಒತ್ತಾಯಿಸಿದ್ದಾರೆ.