ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಸೂಕ್ತ ಪರಿಹಾರ ನೀಡಬೇಕು- ಮಾಜಿ ಸಿಎಂ ಕುಮಾರಸ್ವಾಮಿ ಮನವಿ

ಶನಿವಾರ, 10 ಆಗಸ್ಟ್ 2019 (12:47 IST)
ಬೆಳಗಾವಿ : ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಬೆಳಗಾವಿ ಪ್ರವಾಹ ಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ಮತ್ತೆ ನಾಳೆ ಎರಡು ದಿನಗಳ ಕಾಲ ಸಮೀಕ್ಷೆ ನಡೆಸುವೆ  ಸಚಿವರಿಲ್ಲದ ಹಿನ್ನಲೆ ಶಾಸಕರು ಖುದ್ದು ಕೆಲಸ ಮಾಡಲಿ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಶಾಸಕರು ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ.


ಹಾಗೇ ಪರಿಹಾರ ನೀಡುವ ವಿಚಾರದಲ್ಲಿ ರಾಜ್ಯಕ್ಕೆ, ಕೇಂದ್ರ ತಾರತಮ್ಯ ಮಾಡಬಾರದು. ಕೇಂದ್ರ ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ