ಪಂಚೆಯುಟ್ಟು ಗದ್ದೆಗಿಳಿದ ಕುಮಾರಸ್ವಾಮಿ: ಭತ್ತ ನಾಟಿ ಮಾಡಿ ಸಂಭ್ರಮಿಸಿದ ಮಣ್ಣಿನ ಮಗ

Sampriya

ಭಾನುವಾರ, 11 ಆಗಸ್ಟ್ 2024 (16:54 IST)
Photo Courtesy X
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ರೈತ ಲಕ್ಷ್ಮಣ ಅವರ ಗದ್ದೆಯಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಭತ್ತ ನಾಟಿ ಮಾಡಿ ಗಮನ ಸೆಳೆದರು.

ಇಂದು ಬೆಳಿಗ್ಗೆಯೇ ಕಾವೇರಿ ಹಾಗೂ ಕಟ್ಟೇರಿ ಬಳಿ ಇರುವ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕುಮಾರಸ್ವಾಮಿ, ನಂತರ  ಭತ್ತದ ಪೈರು ಕಣ ಮತ್ತು ಧಾನ್ಯಗಳ ರಾಶಿಗೂ ಕೂಡ ವಿಶೇಷ ಪೂಜೆ ಸಲ್ಲಿಸಿದರು.

ಆ ಬಳಿಕ ಕೃಷಿ ನೂರಾರು ಕಾರ್ಮಿಕ ಮಹಿಳೆಯರೊಂದಿಗೆ ಭತ್ತ ನಾಟಿ ಮಾಡಿ ರೈತರಿಗೆ ಆತ್ಮಸ್ಥೈರ್ಯ ತುಂಬಿದರು. ಈ ವೇಳೆ ಅನೇಕ ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು. ಭತ್ತ ನಾಟಿ ಮಾಡಿ ರೈತರ ಬಗ್ಗೆ ಖುಷಿ ಹಂಚಿಕೊಂಡರು.

ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡ ಅವರು, 'ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ರೈತ ಶ್ರೀ ಲಕ್ಷ್ಮಣ ಅವರ ಗದ್ದೆಯಲ್ಲಿ ಭತ್ತ ನಾಟಿ ಮಾಡಿದೆ. ಭೂಮಿ ತಾಯಿ ಮಕ್ಕಳಾದ ನಮ್ಮೆಲ್ಲರಿಗೂ ಭೂಮಿಯೇ ಸರ್ವಸ್ವ. ಬೇಸಾಯವೇ ಬದುಕು.

'ಭತ್ತದ ನಾಟಿ ನನ್ನ ಮನೆಯ ಕಾರ್ಯಕ್ರಮವೇ ಆಗಿತ್ತು. ರೈತಾಪಿ ಜನರೊಂದಿಗೆ ಇಂತಹ ಸಾರ್ಥಕ, ಅನನ್ಯ  ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ನನ್ನಲ್ಲಿ ಧನ್ಯತೆಯ ಭಾವ ಉಂಟು ಮಾಡಿದೆ.

'ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಸಮಸ್ತ ಅನ್ನದಾತರಿಗೆ ಹೆಗಲು ಕೊಡುವ ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ ಎಂದು ಇದೇ ವೇಳೆ ನಾನು ಜನತೆಗೆ ಹೇಳಬಯಸುತ್ತೇನೆ.

'ಭತ್ತದ ನಾಟಿ ನನ್ನ ಮನೆಯ ಕಾರ್ಯಕ್ರಮವೇ ಆಗಿತ್ತು. ರೈತಾಪಿ ಜನರೊಂದಿಗೆ ಇಂತಹ ಸಾರ್ಥಕ, ಅನನ್ಯ  ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ನನ್ನಲ್ಲಿ ಧನ್ಯತೆಯ ಭಾವ ಉಂಟು ಮಾಡಿದೆ' ಎಂದು ಬರೆದುಕೊಂಡಿದ್ದಾರೆ.

ಇನ್ನೂ ಸದ್ಯ ರಾಜ್ಯ ರಾಜಕಾರಣದಲ್ಲಿ ಡಿಸಿಎಂ ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ನಡುವೆ ವೈಯಕ್ತಿಕ ಸಮರಗಳು ಜೋರಾಗಿದೆ. ಮುಡಾ ಹಾಗೂ ವಾಲ್ಮೀಕಿ ಹಗರಣಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ಈ ವೇಳೆ ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನೂ ಎಚ್‌ಡಿಕೆ ಟೀಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು ಅವರಿಗೆ ಸೂಕ್ತ ಚಿಕಿತ್ಸೆ ನೀಡಬೇಕೆಂದು ಕಿಡಿಕಾರಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ