ರಾಜ್ಯ ಸರಕಾರದ ವೈಪಲ್ಯ ಮುಚ್ಚಲು ಆರ್‌ಎಸ್‌ಎಸ್ ಮೇಲೆ ಆರೋಪ: ಡಿ.ವಿ.ಸದಾನಂದ ಗೌಡ

ಶನಿವಾರ, 17 ಸೆಪ್ಟಂಬರ್ 2016 (10:02 IST)
ಕಾವೇರಿ ಗಲಭೆಯ ಹಿಂದೆ ಆರ್‌ಎಸ್‌ಎಸ್ ಪಾತ್ರದ ಆರೋಪ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ವೈಪಲ್ಯ ಮುಚ್ಚಿ ಹಾಕಿಕೊಳ್ಳಲು ಪ್ರಧಾನಿ ಹಾಗೂ ಆರ್‌ಎಸ್‌ಎಸ್ ಮೇಲೆ ಆರೋಪ ಮಾಡಲಾಗುತ್ತಿದೆ ಎಂದು ಕೇಂದ್ರ ಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಿ.ವಿ.ಸದಾನಂದ ಗೌಡ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರಕಾರ ತಪ್ಪು ಮಾಡಿದೆ. ತಮ್ಮ ವೈಪಲ್ಯವನ್ನು ಮುಚ್ಚಿ ಹಾಕಿಕೊಳ್ಳಲು ಇಂತಹ ಆರೋಪ ಮಾಡಲಾಗುತ್ತಿದೆ. ಗೃಹ ಸಚಿವರ ಸ್ಥಾನದಲ್ಲಿರುವವರು ಇಂತಹ ಬಾಲಿಶ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದರು. 
 
ಇಂತಹ ರಾಜಕಾರಣವನ್ನು ರಾಜ್ಯದ ಜನತೆ ಸಹಿಸುವುದಿಲ್ಲ. ಗಲಭೆಯ ಹಿಂದೆ ಆರ್‌ಎಸ್‌ಎಸ್ ಕೈವಾಡವಿದ್ದರೇ ಸೂಕ್ತ ಸಾಕ್ಷಾಧಾರಗಳನ್ನು ಒದಗಿಸಿ, ಆರೋಪಿಗಳನ್ನು ಬಂಧಿಸಲಿ ಎಂದು ಕೇಂದ್ರ ಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಿ.ವಿ.ಸದಾನಂದ ಗೌಡ ಒತ್ತಾಯಿಸಿದ್ದಾರೆ. 
 
ಕಾವೇರಿ ಗಲಭೆಗೆ ಆರ್‌ಎಸ್‌ಎಸ್ ಕಾರಣ. ಈ ಕುರಿತು ತನಿಖೆ ನಡೆಸಿ ಸತ್ಯಾಸತ್ಯಗೆಗಳನ್ನು ಬಯಲಿಗೆಳೆಯಬೇಕು. ಇಲ್ಲದಿದ್ದರೇ ಸರಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಒತ್ತಾಯಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ