ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಕುದುರೆ ವ್ಯಾಪಾರ: ಸದಾನಂದಗೌಡ
ಶುಕ್ರವಾರ, 10 ಜೂನ್ 2016 (10:25 IST)
ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರಕಾರ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಗಂಭೀರವಾಗಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಸದಾನಂದಗೌಡ, ರಾಜ್ಯಸಭೆ ಚುನಾವಣೆ ಕುರಿತು ಕಾಂಗ್ರೆಸ್ ಸರಕಾರಕ್ಕೆ ಆಂತಕ ಶುರುವಾಗಿದ್ದು, ಕುದುರೆ ವ್ಯಾಪಾರಕ್ಕೆ ಮುಂದಾಗಿದೆ. ರಾಜ್ಯ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಳಿಕೆಯ ಕುರಿತು ಜನರಿಗೆ ಗೊತ್ತಾಗಿದೆ ಎಂದು ಹೇಳಿದರು.
ಬಿಜೆಪಿ ಕುದುರೆ ವ್ಯಾಪಾರ ಮತ್ತು ರೆಸಾರ್ಟ್ ರಾಜಕೀಯಕ್ಕೆ ಮುಂದಾಗುವುದಿಲ್ಲ. ಚುನಾವಣೆಯಲ್ಲಿ ನಮ್ಮ ಪಕ್ಷ ಶಿಸ್ತುಬದ್ಧವಾಗಿ ನಡೆದುಕೊಳ್ಳುತ್ತಿದೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆ. ವೋಟಿಗಾಗಿ ನೋಟು ಪ್ರಕರಣದಲ್ಲಿ ಭಾಗಿಯಾದವರ ಕುರಿತು ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ