ಕೊರೊನಾ ಬಾಧಿತ ಕ್ಷೇತ್ರಗಳಿಗೆ 1.1 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ ಕೇಂದ್ರ ಸರಕಾರ

ಬುಧವಾರ, 30 ಜೂನ್ 2021 (15:48 IST)
ಕೊರೊನಾದಿಂದ ತೊಂದರೆಗೆ ಒಳಗಾದ ಕ್ಷೇತ್ರಗಳ ನೆರವಿಗಾಗಿ 1.1 ಲಕ್ಷ ಕೋಟಿ ರೂ. ಪ್ಯಾಕೇಜ್ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ದೆಹಲಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಅಡಿದ ಅವರು ವೈದ್ಯಕೀಯ ಮೂಲ ಸೌಕರ್ಯಕ್ಕೆ 50 ಸಾವಿರ ಕೋಟಿ ರೂ. ಹಾಗೂ ಉಳಿದ ವಲಯಗಳಿಗೆ 60 ಸಾವಿರ ಕೋಟಿ ರೂ. ನೆರವು ಪ್ರಕಟಿಸಿದರು.
 
ಕೊರೊನಾ ಎರಡನೇ ಅಲೆಯಲ್ಲಿ ಕೇಂದ್ರ ಸರಕಾರ ಪ್ರಕಟಿಸುತ್ತಿರುವ ಮೂರನೇ ಹಂತದ ಪ್ಯಾಜೇಜ್ ಇದಾಗಿದ್ದು, 8 ಘೋಷಣೆಗಳನ್ನು ಮಾಡಲಾಗುತ್ತಿದ್ದು, ಇದರಲ್ಲಿ 4 ಹೊಸ ಘೋಷಣೆಗಳಾಗಿವೆ. ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿಗಾಗಿ ತುರ್ತು ಕ್ರೆಡಿಟ್ ಲಿಂಕಿಂಗ್ ಸಿಸ್ಟಮ್ ನಲ್ಲಿ ಶೇ.7.95ರ ಬಡ್ಡಿ ದರದಲ್ಲಿ ಸಾಲ ಒದಗಿಸಲಾಗುವುದು ಎಂದು ಅವರು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ