ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ಜಲಾನಯನ ಪ್ರದೇಶದ ವಸ್ತುಸ್ಥಿತಿ ಅಧ್ಯಯನ ಮಾಡಲು ಇಂದು ಕೇಂದ್ರದ ತಾಂತ್ರಿಕ ತಂಡ ರಾಜ್ಯಕ್ಕೆ ಆಗಮಿಸಿದೆ.
ಸುಪ್ರೀಂಕೋರ್ಟ್ ಅನುಮತಿ ಪಡೆದು ಕೇಂದ್ರ ಸರಕಾರ ಈ ತಂಡವನ್ನು ನೇಮಿಸಿದೆ. ತಾಂತ್ರಿಕ ಉನ್ನತಾಧಿಕಾರಿಗಳ ತಂಡಕ್ಕೆ ರಾಜ್ಯದಿಂದಲೂ ಸದಸ್ಯರ ನೇಮಕವಾಗಲಿದೆ. ಸದ್ಯ ಇನ್ನೂ ಪ್ರತಿನಿಧಗಳ ಹೆಸರು ಘೋಷಣೆಯಾಗಿಲ್ಲ ಎಂದು ತಿಳಿದು ಬಂದಿದೆ.
ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್.ಝಾ ನೇತೃತ್ವದ ತಂಡದಲ್ಲಿ ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ ಡೈರೆಕ್ಟರ್ ಜನರಲ್ ಎಸ್.ಮಸೂದ್ ಹುಸೇನ್, ಕೇಂದ್ರದ ಮುಖ್ಯ ಎಂಜನಿಯರಿಂಗ್ ವಿಭಾಗದ ಆರ್.ಕೆ.ಗುಪ್ತಾ ಸದಸ್ಯರಾಗಿ ಆಗಮಿಸಲಿದ್ದಾರೆ.
ಸುಪ್ರೀಂಕೋರ್ಟ್ ಸೂಚನೆಯಂತೆ ಉಭಯ ರಾಜ್ಯಗಳಲ್ಲಿನ ನೀರಿನ ಲಭ್ಯತೆ ಕುರಿತು ಪರಿಶೀಲನೆ ನಡೆಸಲು ಕೇಂದ್ರದ ತಂಡ ಕಾವೇರಿ ಜಲಾನಯನ ಪ್ರದೇಶಕ್ಕೆ ಆಗಮಿಸಿದ್ದು, ರಾಜ್ಯಗಳಲ್ಲಿರುವ ನೀರಿನ ಲಭ್ಯತೆ ಹಾಗೂ ವಸ್ತುಸ್ಥಿತಿ ಕುರಿತು ಅಧ್ಯಯನ ನಡೆಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ