ಸಿಇಟಿ: ಎರಡನೇ ದಿನ ಶೇ 93.16ರಷ್ಟು ಹಾಜರು

ಭಾನುವಾರ, 21 ಮೇ 2023 (20:50 IST)
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುತ್ತಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ ಇ ಟಿ -23) ಎರಡನೇ ದಿನವಾದ ಭಾನುವಾರ ರಾಜ್ಯದಲ್ಲೆಡೆ ಯಾವುದೇ ಅಡೆತಡೆ ಇಲ್ಲದೆ ಪಾರದರ್ಶಕವಾಗಿ ನಡೆಯಿತು.
 
ಬೆಂಗಳೂರಿನ 121 ಕೇಂದ್ರಗಳು ಸೇರಿದಂತೆ ರಾಜ್ಯದ ಎಲ್ಲಾ 592 ಕೇಂದ್ರಗಳಲ್ಲಿ ಪರೀಕ್ಷೆಯು ಪಾರದರ್ಶಕವಾಗಿ ನಡೆದಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಒಟ್ಟು ನೋಂದಾಯಿಸಿದ್ದ 2,61,610 ವಿದ್ಯಾರ್ಥಿಗಳ ಪೈಕಿ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳಿಗೆ ತಲಾ 2,39,716 (93.16%) ವಿದ್ಯಾರ್ಥಿಗಳು ಹಾಜರಾಗಿದ್ದರು.
 
ಸೋಮವಾರ, ಮೇ 22ರಂದು ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆಯು ನಿಗದಿಯಾಗಿರುವಂತೆ ನಡೆಯಲಿದೆ. ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಮತ್ತು ಬೆಂಗಳೂರು ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ