ಇಂದಿನಿಂದ ವೃತ್ತಿಪರ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆ

ಶನಿವಾರ, 28 ಆಗಸ್ಟ್ 2021 (15:08 IST)
ಕೊರೊನಾ ಕಾರಣಕ್ಕಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆಯದೆ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಆದರೆ ವೃತ್ತಿಪರ ಕೋರ್ಸ್ ಗಳಿಗೆ ಹೋಗಲು ಸಾಮಾನ್ಯ ಪ್ರವೇಶ ಪರೀಕ್ಷೆಗಳು
ನಡೆಯುತ್ತಿವೆ.
ಇಂದು ಹಾಗೂ ನಾಳೆ  ರಾಜ್ಯಾದಾದ್ಯಂತ ಸಿಇಟಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಏದುರಿಸಲಿದ್ದಾರೆ. ಕೊಪ್ಪಳ ಜಿಲ್ಲೆಯ 9 ಪರೀಕ್ಷಾ ಕೇಂದ್ರದಲ್ಲಿ ಒಟ್ಟು 3600 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಹೇಗೊ ಪಾಸಾಗಿದ್ದಾರೆ. ಅದರಲ್ಲಿ ವಿಜ್ಞಾನ ಓದಿರುವ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಕ್ಕಾಗಿ  ಪರೀಕ್ಷೆ ಏದುರಿಸಬೇಕಾಗಿದೆ. ಇಂದು ಮುಂಜಾನೆ 10.30 ರಿಂದ ಆರಂಭವಾಗಿವೆ.
ನಾಳೆಯೂ ಸಹ ಎರಡು ವಿಷಯಗಳ ಪರೀಕ್ಷೆ ನಡೆಯಲಿವೆ. ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 9 ಪರೀಕ್ಷಾ ಕೇಂದ್ರಗಳಿದ್ದು 3600 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮುಂಜಾನೆ ಯಿಂದಲೇ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ತಮ್ಮ ಪಾಲಕರೊಂದಿಗೆ ಆಗಮಿಸಿದ್ದು ಪರೀಕ್ಷೆ ಬರೆಯುವ ವಿದ್ಯಾರ್ಥಿ ಗಳಿಗಿಂತ ಪಾಲಕರಲ್ಲಿ ಅಧಿಕ ಒತ್ತಡವಿದ್ದಂತೆ ಮಕ್ಕಳನ್ನು ಪರೀಕ್ಷಾ ಕೇಂದ್ರದೊಳಗೆ ಬಿಟ್ಟು ಒಂದು ಆಲ್ ದಿ ಬೆಸ್ಟ್ ಹೇಳಿ ಶುಭಾಶಯ ಕೋರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ