ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಜೂ.16ರಿಂದ 18ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ 2022ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಒಟ್ಟಾರೆ 2,16,525 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸೇರಿ ಒಟ್ಟು 486 ಕೇಂದ್ರಗಳಲ್ಲಿ ಈ ಬಾರಿ ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವವರ ಪೈಕಿ ಈ ಬಾರಿ 1,04,550 ಗಂಡುಮಕ್ಕಳು ಹಾಗೂ 1,11,975 ಹೆಣ್ಣು ಮಕ್ಕಳಿದ್ದಾರೆ ಎಂದು ಕೆಇಎ ಅಧಿಕಾರಿಗಳು ತಿಳಿಸಿದ್ದಾರೆ. 16 ರಂದು ಜೀವಶಾಸ್ತ್ರ, ಗಣಿತ, 17ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ, 18ರಂದು ಹೊರನಾಡು, ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಯಲಿದೆ.