ಚಾಮರಾಜನಗರ: ಒಟ್ಟಿಗೆ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು, ಕಾರಣ ನಿಗೂಢ

Sampriya

ಗುರುವಾರ, 2 ಏಪ್ರಿಲ್ 2026 (18:59 IST)
ಚಾಮರಾಜನಗರ: ಪ್ರೇಮಿಗಳಿಬ್ಬರು ಆತ್ಮಹತ್ಯೆಮಾಡಿಕೊಂಡ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರಟ್ಟಿ ಗ್ರಾಮದಲ್ಲಿವರದಿಯಾಗಿದೆ. 

ಆತ್ಮಹತ್ಯೆಗೆ ಶರಣಾದ ಜೋಡಿಗಳನ್ನು ಹನೂರು ತಾಲೂಕಿನ ಮಿಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಕ್ಕುಂದಿ ಗ್ರಾಮದ ನಾಗೇಂದ್ರ (21) ಪಾಲಾರ್ ಗ್ರಾಮದ ನದಿಯಾ (19) ಎಂದು ಗುರುತಿಸಲಾಗಿದೆ. 

ಏನಿದು ಪ್ರಕರಣ: ಪಾಲಾರ್ ಗ್ರಾಮದ ಮಾದೇವರ ಪುತ್ರಿ ನದಿಯಾ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಐಪಿಹೆಚ್ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ, ಇದ್ದಕ್ಕಿದ್ದ ಹಾಗೇ ನಾಪತ್ತೆಯಾಗಿದ್ದರು. ಈ ವಿಚಾರವಾಗಿ ಐಪಿಹೆಚ್ ಸಂಸ್ಥೆಯವರು ಪೋಷಕರಿಗೆ ಮಾಹಿತಿ ನೀಡಲು ಪ್ರಯತ್ನಿಸಿದ್ದಾರೆ. ಆದರೆ, ಪಾಲಾರ್ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಮಾಹಿತಿ ತಿಳಿಯುವುದು ತಡವಾಗಿದೆ.

ಪೊನ್ನಾಚಿ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಕುಳ್ಳು ಮಾರಮ್ಮ ಜಾತ್ರಾ ಮಹೋತ್ಸವಕ್ಕೆಂದು ನಕ್ಕುಂದಿ ಗ್ರಾಮದ ನಾಗೇಂದ್ರನನ್ನು ತಾತ ಶಿವ ಮಾದಯ್ಯ ಮನೆಗೆ ಕರೆದುಕೊಂಡು ಬಂದಿದ್ದರು. 

ತಡರಾತ್ರಿ ಇಬ್ಬರು ಕೊಠಡಿಯೊಳಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. . ಈ ವಿಚಾರ ತಿಳಿಯುತ್ತಿದ್ದಂತೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಜಗದೀಶ್ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ