ಚಾಮರಾಜಪೇಟೆ ದನದ ಕೆಚ್ಚಲು ಕೊಯ್ದ ಪ್ರಕರಣ: ಆರೋಪಿ ಸೈಯದ್ ನಸ್ರು ಅರೆಸ್ಟ್

Krishnaveni K

ಸೋಮವಾರ, 13 ಜನವರಿ 2025 (09:45 IST)
Photo Credit: X
ಬೆಂಗಳೂರು: ಚಾಮರಾಜಪೇಟೆಯಲ್ಲಿ ದನದ ಕೆಚ್ಚಲು ಕೊಯ್ದು ಪ್ರಕರಣದಲ್ಲಿ ಆರೋಪಿಗಳಲ್ಲಿ ಒಬ್ಬನಾಗಿರುವ ಸೈಯದ್ ನಸ್ರು ಅರೆಸ್ಟ್ ಆಗಿದ್ದಾನೆ.

ಈತ ಬಿಹಾರದ ಚಂಪರಣ್ ಮೂಲದ ನಿವಾಸಿ ಎಂದು ತಿಳಿದುಬಂದಿದೆ. 30 ವರ್ಷದ ಸೈಯದ್ ಕೃತ್ಯ ನಡೆದ ಪಕ್ಕದಲ್ಲೇ ಬಟ್ಟೆ ಅಂಗಡಿಯಲ್ಲಿ ಹೊಲಿಯುವ ಕೆಲಸ ಮಾಡಿಕೊಂಡಿದ್ದ. ಕುಡಿದ ಮತ್ತಿನಲ್ಲಿ ಕೃತ್ಯವೆಸಗಿರುವುದಾಗಿ ಪೊಲೀಸರ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ.

ಆರೋಪಿಯನ್ನು ಬಂಧಿಸಿದ ಬಳಿಕ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಜನವರಿ 24 ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರದ ನಿವಾಸಿ ಕರ್ಣ ಎಂಬವರ ಹಸುವಿನ ಮೇಲೆ ದುರುಳರು ಕ್ರೌರ್ಯ ಮೆರೆದಿದ್ದರು. ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲು ಕುಯ್ದು ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿದ್ದರು.

ಈ ಬಗ್ಗೆ ಹಸುಗಳ ಮಾಲಿಕ ಕರ್ಣ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅದರಂತೆ ದೂರು ದಾಖಲಿಸಕೊಂಡ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.  ಸದ್ಯಕ್ಕೆ ಹಸುಗಳಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿವೆ ಎಂದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ