ಶ್ರೀಮಂತ ದೇವರಿಗೆ ಚಂಪಾ ಷಷ್ಠಿ ಮಹೋತ್ಸವ

ಸೋಮವಾರ, 2 ಡಿಸೆಂಬರ್ 2019 (20:33 IST)
ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ಒಂದಾಗಿರೋ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಸಡಗರ ಮನೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿ ಮಹೋತ್ಸವ ಬಹು ವಿಜೃಂಭಣೆಯಿಂದ  ಜರುಗಿತು.  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ಮಹಾರಥೋತ್ಸವದೊಂದಿಗೆ ಸಂಪನ್ನಗೊಂಡಿತು. ಧನುರ್ ಲಗ್ನದಲ್ಲಿ ಮುಂಜಾನೆ 8.37 ರ ಮುಹೂರ್ತದಲ್ಲಿ ಸುಬ್ರಹ್ಮಣ್ಯ ಆದಿಯಾಗಿ ಉಮಾಮಹೇಶ್ವರ ದೇವರಿಗೆ ನಡೆದ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಪಾಲ್ಗೊಳ್ಳುವ ಮೂಲಕ ದೇವರ ದರ್ಶನ ಪಡೆದು ಕೃತಾರ್ಥರಾದರು.

ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಹದಿನಾರು ದಿನಗಳ ಕಾಲ ನಡೆಯುವ ಜಾತ್ರೋತ್ಸವದ ಕಾರ್ಯಕ್ರಮಗಳಲ್ಲಿ ಕ್ಷೇತ್ರದಲ್ಲಿ ಮೂರು ದಿನಗಳ ಆಚರಣೆಗಳು ವಿಶಿಷ್ಟವಾಗಿರುತ್ತದೆ. ಚೌತಿ, ಪಂಚಮಿ ಹಾಗೂ ಷಷ್ಠಿ ಯಂದು ಇಲ್ಲಿ ವಿಶೇಷ ಸೇವೆಯಾದ ಎಡೆಮಡೆಸ್ನಾನದ ಜೊತೆಗೆ ಕ್ಷೇತ್ರಾಧಿಪತಿಯಾದ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಉಮಾಮಹೇಶ್ವರ ದೇವರಿಗೆ ರಥೋತ್ಸವವೂ ನಡೆಯುತ್ತದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ