ಕರ್ನಾಟಕದಲ್ಲಿ ಮೈಕೊರೆಯುವ ಚಳಿಯ ಮಧ್ಯೆ ಮಳೆ ಸಾದ್ಯತೆ
ರಾಜ್ಯದಲ್ಲಿ ಚಳಿ ಹೆಚ್ಚಾಗಿದೆ. ಬಂಗಾಳಕೊಲ್ಲಿ ಉಪಸಾಗರದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಳವಾದ ಬೆನ್ನಲ್ಲೇ ರಾಜ್ಯದಲ್ಲಿ ಚಳಿಯ ಅಬ್ಬರ ಬಲು ಜೋರಾಗಿಯೇ ಇದೆ. ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು ಮುಂದಿನ 24 ಗಂಟೆಗಳ ಕಾಲ ಬೆಳಿಗ್ಗೆ ಮಂಜು ಮುಸುಕಿದ ಮೋಡ ಕವಿದ ವಾತಾವರಣ ಇರಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 26 ಮತ್ತು 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಲಘು ಮಳೆಯಾಗುವ ಸಾಧ್ಯತೆ ಇದೆ ಅಂತ ತಿಳಿದು ಬಂದಿದೆ.