ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಸಂಚಾರದಲ್ಲಿ ಬದಲಾವಣೆ

ಶುಕ್ರವಾರ, 25 ಆಗಸ್ಟ್ 2023 (08:02 IST)
ಬೆಂಗಳೂರು : ಸಿಲಿಕಾನ್ ಸಿಟಿಗೆ ಪ್ರಧಾನಿ ನರೇಂದ್ರ ಮೋದಿ ಅಗಮಿಸುತ್ತಿರುವ ಹಿನ್ನಲೆ ಸಂಚಾರದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ.
 
ಸಂಚಾರಿ ಪೊಲೀಸರು ನಗರದ ಕೆಲ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ. ಈ ಮೂಲಕ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ಆಗಸ್ಟ್ 26 ಬೆಳಗ್ಗೆ 4:30 ರಿಂದ ಬೆಳಗ್ಗೆ 9:30 ರ ವರೆಗೆ ಕೆಳಕಂಡ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಈ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗ ಬಳಕೆಗೆ ಪೊಲೀಸರ ಮನವಿ ಮಾಡಿಕೊಳ್ಳಲಾಗಿದೆ. ಇನ್ನು ಭಾರೀ ಸರಕು ಸಾಗಾಣಿಕೆ ವಾಹನಗಳ ಸಂಚಾರ ನಿರ್ಬಂಧ ಮಾಡಲಾಗಿದೆ. ನಗರದೊಳಗೆ ಆಗಸ್ಟ್ 26ರ ಬೆಳಗ್ಗಿನ ಜಾವ 04.00 ಗಂಟೆಯಿಂದ ಬೆಳಗ್ಗೆ 11.00 ಗಂಟೆಯವರೆಗೆ ನಿಷೇಧ ಮಾಡಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ