ಚಾಮುಂಡಿ ಬೆಟ್ಟದ ಹೆಸರೇ ಚೇಂಜ್: ಎಲ್ಲಾ ಮಹಿಷಾಸುರನ ಮಹಿಮೆ

Sampriya

ಶುಕ್ರವಾರ, 27 ಸೆಪ್ಟಂಬರ್ 2024 (16:46 IST)
Photo Courtesy X
ಮೈಸೂರು: ನಾಡಹಬ್ಬ ದಸರಾ ಸಂದರ್ಭದಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಚರ್ಚೆಗೆ ಕಾರಣವಾಗುವ ಮಹಿಷಾ ದಸರಾದಿಂದ ಈ ಬಾರಿ ಮೈಸೂರು ಹೆಸರೇ ಚೇಂಜ್ ಆಗಿದೆ.

ಮಹಿಷಾ ದಸರಾದಿಂದ ಮೈಸೂರು ಹೆಸರೇ ಬದಲಾಗಿದೆ. ಮಹಿಷ ದಸರಾ ಆಚರಣಾ ಸಮಿತಿ ನಡೆಸುವ ಆಹ್ವಾನ ಪತ್ರಿಕೆಯಲ್ಲಿ ಚಾಮುಂಡಿಬೆಟ್ಟ  ಬದಲಿಗೆ ಮಹಿಷಾ ಬೆಟ್ಟ ಎಂದು ಹೆಸರು ಮುದ್ರಿಸಿರುವುದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಇದೇ ತಿಂಗಳು 29 ರಂದು ಮಹಿಷಾ ದಸರಾ ನಡೆಸಲು ಸಮಿತಿ ತೀರ್ಮಾನಿಸಿದೆ. ಅಂದು ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರಿನಿಗೆ ಪುಷ್ಪಾರ್ಚನೆ ಮಾಡಿ ನಂತರ ಪುರಭವನದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಮಹಿಷಾ ದಸರಾ ಆರಂಭವಾದ ದಿನದಿಂದ ಒಂದಲ್ಲ ಒಂದು ವಿವಾದಕ್ಕೆ ಕಾರಣವಾಗುತ್ತಲೇ ಇದೆ. ಈ ಬಾರಿ ಯಾವುದೇ ಕಾರಣಕ್ಕೂ ಮಹಿಷಾ ದಸರಾ ಮಾಡಲು ಬಿಡುವುದಿಲ್ಲ.  ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಮುಂದಾದರೆ ನಾವು ಚಾಮುಂಡಿ ಚಲೋ ಮಾಡುತ್ತೇವೆ. ಮಹಿಷನ ಭಕ್ತರ ಕೈ ಮೇಲಾಗುತ್ತದೋ ಚಾಮುಂಡಿಯ ಭಕ್ತರ ಕೈ ಮೇಲಾಗುತ್ತದೋ ನೋಡಿಯೇ ಬಿಡೋಣ ಎಂದು ಮಹಿಷ ದಸರಾ ಆಚರಣೆ ಸಮಿತಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸವಾಲು ಹಾಕಿದ್ದಾರೆ.

ಇದರ ಬೆನ್ನಲ್ಲೇ ಚಾಮುಂಡಿ ಹೆಸರು ಬದಲಾವಣೆಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ