ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವುದರಿಂದ ಯಾವುದೇ ನಷ್ಟವಿಲ್ಲ ಎಂದು ಜಿಲ್ಲಾ ರಾಮನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ರಾಮನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಮರುನಾಮಕರಣ ಮಾಡುವ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನನ್ನ ಜೊತೆ ವೈಯಕ್ತಿಕವಾಗಿ ಚರ್ಚಿಸಿಲ್ಲ. ಆದರೂ, ಹೆಸರು ಬದಲಾವಣೆಯಿಂದ ಯಾವ ನಷ್ಟವೂ ಇಲ್ಲ ಎಂದರು.