ದರ್ಶನ್‌ ವಿರುದ್ಧದ ಆರೋಪಪಟ್ಟಿಯ ಅಂಶ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ್‌

Sampriya

ಮಂಗಳವಾರ, 10 ಸೆಪ್ಟಂಬರ್ 2024 (14:23 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಸೇರಿದಂತೆ 16 ಮಂದಿ ಆರೋಪಿಗಳಾಗಿರುವ  ಜಾರ್ಜ್ ಶೀಟ್‌ನಲ್ಲಿರುವ ಅಂಶಗಳು ಸಾರ್ವಜನಿಕವಾಗಿ ಬಟ್ಟಬಯಲು ಆಗುವುದರಿಂದ ಕೋರ್ಟ್‌ ಪ್ರಕ್ರಿಯೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಚಾರ್ಜ್‌ಶೀಟ್‌ನಲ್ಲಿ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ಎದುರಾಳಿ ವಕೀಲರಿಗೂ ಅದರ ಪ್ರತಿ ನೀಡಲಾಗುತ್ತದೆ. ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್‌ಶೀಟ್‌ನಲ್ಲಿ ಮಾಹಿತಿ ಹೊರಗೆ ಬರುತ್ತದೆ. ಕೋರ್ಟ್‌ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದರು.

ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪಪಟ್ಟಿ ಮತ್ತು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪ್ರಕರಣದ ವಿಚಾರಣೆ ಮುಂದುವರಿಯಲಿದೆ. ಸಾರ್ವಜನಿಕವಾಗಿ ಯಾರಾದರೂ ಏನಾದರೂ ಮಾತನಾಡುತ್ತಾರೆ ಎಂಬ ಕಾರಣಕ್ಕೆ ನ್ಯಾಯಾಲಯ ಅದನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ. ಅವರು ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಸುತ್ತಾರೆ ಎಂದರು.

 ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಸಂಬಂಧ ಮೂರು ದಿನಗಳ ಹಿಂದೆ ಪೊಲೀಸರು 3,991 ಪುಟಗಳ ಪ್ರಾಥಮಿಕ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ