ಚಾರ್ಮಾಡಿ ಘಾಟ್ : ನೂರಾರು ಎಕರೆ ಅರಣ್ಯ ಪ್ರದೇಶ ಆಹುತಿ

ಸೋಮವಾರ, 6 ಮಾರ್ಚ್ 2023 (16:33 IST)
ಚಿಕ್ಕಮಗಳೂರು : ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಕೊಟ್ಟ ಪರಿಣಾಮ ನೂರಾರು ಎಕರೆ ಎರಕೆ ಅರಣ್ಯ ಹೊತ್ತಿ ಉರಿದು, ಪ್ರಾಣಿಪಕ್ಷಿಗಳು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.
 
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಗೆ ಹೊಂದಿಕೊಂಡಂತೆ ಇರುವ ಆಲೇಖಾನ್ ಹೊರಟ್ಟಿ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಕೊಟ್ಟ ಪರಿಣಾಮ ನೂರಾರು ಎಕರೆ ಅರಣ್ಯ ಹೊತ್ತಿ ಉರಿದಿದ್ದಲ್ಲದೆ ಪ್ರಾಣಿ-ಪಕ್ಷಿಗಳು ಕೂಡ ಬೆಂಕಿಗಾಹುತಿಯಾಗಿವೆ.

ವಿಷಯ ತಿಳಿದು ಸ್ಥಳಕ್ಕೆ ಹೋದ ಅರಣ್ಯ ಅಧಿಕಾರಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅರಣ್ಯ ಅಧಿಕಾರಿಗಳಿಗೆ ಸ್ಥಳೀಯರು ಸಾಥ್ ನೀಡಿದ್ದಾರೆ. ಗುಡ್ಡದ ಎತ್ತರದ ಪ್ರದೇಶದಲ್ಲಿ ಬೆಂಕಿ ಬಿದ್ದ ಪರಿಣಾಮ ಆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ವಾಹನಗಳು ಹೋಗಲು ಸಾಧ್ಯವಾಗಿಲ್ಲ. ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರು ಮರದ ರೆಂಬೆ-ಕೊಂಬೆಗಳಿಂದ ಬೆಂಕಿಯನ್ನ ಬಡಿದು ಆರಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ