ನೆರೆ ಸಂತ್ರಸ್ತರಿಗೆ ರಾಜ್ಯ ಬಿಜೆಪಿ ಸರ್ಕಾರ ನೀಡಿದ್ದ ಚೆಕ್ ಬೌನ್ಸ್
ಶುಕ್ರವಾರ, 31 ಜನವರಿ 2020 (10:52 IST)
ಬೆಳಗಾವಿ: ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಬಿರನಗಡ್ಡಿ ಗ್ರಾಮದ ನೆರೆ ಸಂತ್ರಸ್ತರಿಗೆ ರಾಜ್ಯ ಬಿಜೆಪಿ ಸರ್ಕಾರ ನೀಡಿದ್ದ 160 ಚೆಕ್ ಗಳು ಬೌನ್ಸ್ ಆಗಿದೆ ಎಂಬುದಾಗಿ ತಿಳಿದುಬಂದಿದೆ.
ಬಿರನಗಡ್ಡಿ ಗ್ರಾಮದ ನೆರೆ ಸಂತ್ರಸ್ತರಿಗೆ ರಾಜ್ಯ ಬಿಜೆಪಿ ಸರ್ಕಾರ ತಲಾ ರೂ. 10 ಸಾವಿರ ರೂ. ಪರಿಹಾರ ನೀಡಿತ್ತು. ಆದರೆ ಈಗ ಪ್ರವಾಹದ ವೇಳೆ ಬಿರನಗಡ್ಡಿ ಸಂಪೂರ್ಣ ಜಲಾವೃತವಾಗಿಲ್ಲ ಎಂದು ಹೇಳಿ ಅಧಿಕಾರಿಗಳು ನೆರೆ ಪರಿಹಾರ ತಡೆಹಿಡಿದಿದ್ದಾರೆ.
ಈ ಹಿನ್ನಲೆಯಲ್ಲಿ ಗ್ರಾಮದ 160 ಜನರಿಗೆ ನೀಡಲಾಗಿದ್ದ ಚೆಕ್ ಗಳು ಬೌನ್ಸ್ ಆಗಿದ್ದು ಸಂತ್ರಸ್ತರು ಪರದಾಡುತ್ತಿದ್ದಾರೆ ಎನ್ನಲಾಗಿದೆ.