ಯಡಿಯೂರಪ್ಪ ಇಲ್ಲ ಅಂದ್ರೆ ಬಿಜೆಪಿ ಇಲ್ಲ ಎಂದ ಚೆಲುವರಾಯಸ್ವಾಮಿ

ಗುರುವಾರ, 6 ಅಕ್ಟೋಬರ್ 2022 (12:22 IST)
ಮಂಡ್ಯ : ಬಿಜೆಪಿಯಲ್ಲಿ ನೂರು ಬಾಗಿಲು, ನಮ್ಮಲ್ಲಿ ಒಂದೇ ಬಾಗಿಲು. ಯಡಿಯೂರಪ್ಪ ಇಲ್ಲ ಅಂದ್ರೆ ಬಿಜೆಪಿ ಇಲ್ಲ.
 
ಅಧಿಕಾರದ ದರ್ಪದಲ್ಲಿ ಬಿಜೆಪಿಯವ್ರು ಮಾತಾಡುತ್ತಿದ್ದಾರೆ ಅಷ್ಟೇ ಎಂದು ಮಾಜಿ ಸಂಸದ ಚೆಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಉತ್ಸಾಹದಿಂದ ಸಾಗುತ್ತಿದೆ. ಸೋನಿಯಾ ಗಾಂಧಿ ಯವರು ಭಾಗವಹಿಸ್ತಿರೋದು ನಮಗೆಲ್ಲ ಹೆಮ್ಮೆ. ಅಧಿಕಾರಕ್ಕಿಂತ ಹೆಚ್ಚಾಗಿ ಪ್ರಜಾಪ್ರಭುತ್ವ ಗಟ್ಟಿ ಮಾಡಲು ರಾಹುಲ್ ಗಾಂಧಿ ಈ ಯಾತ್ರೆ ಮಾಡುತ್ತಿದ್ದಾರೆ ಎಂದರು.

ಪಾದಯಾತ್ರೆಗೆ ಪಕ್ಷಾತೀತವಾಗಿ ಬೆಂಬಲ ಸಿಕ್ತಿದೆ. ಈ ಭಾಗ ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರ ಕೋಟೆಯಾಗಿತ್ತು. ನಂತರ ಜೆಡಿಎಸ್ ಕೋಟೆಯಾಗಿತ್ತು. ಮುಂದೆ ಜನ ಯಾರ ಕಡೆ ತೀರ್ಪು ಕೊಡ್ತಾರೆ ಅಂತ ನೋಡಿ ಎಂದು ಹೇಳಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ