ಆಹಾರ ಪದಾರ್ಥಗಳಲ್ಲಿ ರಾಸಾಯನಿಕ ಬಳಕೆ: ತನಿಖೆಗೆ ಸಚಿವ ಖಾದರ್ ಆದೇಶ

ಶನಿವಾರ, 28 ಮೇ 2016 (20:21 IST)
ಆಹಾರ ಪದಾರ್ಥಗಳಲ್ಲಿ ರಾಸಾಯನಿಕ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಕೆಟ್‌ನಲ್ಲಿ ಆಹಾರ ಪದಾರ್ಥಗಳ ಸ್ಯಾಂಪಲ್ ಪಡೆದುಕೊಂಡು ಲ್ಯಾಬ್‌ಗೆ ಕಳುಹಿಸಿ ಕ್ರಮಕೈಗೊಳ್ಳುತ್ತೇನೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
 
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಯು.ಟಿ.ಖಾದರ್, ಮಾರ್ಕೆಟ್‌ನಲ್ಲಿ ಆಹಾರ ಪದಾರ್ಥಗಳ ಸ್ಯಾಂಪಲ್ ಪಡೆದುಕೊಂಡು ಮೊದಲು ಲ್ಯಾಬ್‌ಗೆ ಕಳುಹಿಸಿ ಪರೀಕ್ಷೆ ನಡೆಸುತ್ತೇವೆ. ಸರಕಾರದಿಂದ ವರದಿ ಬಂದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. 
 
ಮಾರುಕಟ್ಟೆಯಿಂದ ಪಡೆದುಕೊಂಡ ಆಹಾರ ಪದಾರ್ಥಗಳ ಸ್ಯಾಂಪಲ್‌ಗಳನ್ನು ಪರೀಕ್ಷೆಗಾಗಿ ಮೊದಲು ರಾಜ್ಯದ ಲ್ಯಾಬ್‌ಗೆ ಕಳುಹಿಸುತ್ತೇವೆ. ತದನಂತರ, ಕೇಂದ್ರದ ಲ್ಯಾಬ್‌ಗೆ ಕಳುಹಿಸಿ ಪರೀಕ್ಷೆ ನಡೆಸುತ್ತೇವೆ. ಈ ಪರೀಕ್ಷೆಗಳಲ್ಲಿ ಆಹಾರ ಪದಾರ್ಥಗಳಲ್ಲಿ ಕೆಮಿಕಲ್ ಅಂಶಗಳು ಕಂಡು ಬಂದರೆ ಆ ಪದಾರ್ಥಗಳನ್ನು ಮಾರುಕಟ್ಟೆಯಲ್ಲಿ ನಿಷೇಧಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.  

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ