ಚಿತ್ರದುರ್ಗ: ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಸಚಿವ ಜಮೀರ್ ಅಹ್ಮದ್‌ಗೆ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆ ಸಚಿವರು ಜಿಲ್ಲೆಗೆ ಆಗಮಿಸಿದ್ದರು. ಅಂತೆಯೇ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಸ್ಪತ್ರೆಯಲ್ಲಿ ಹೃದಯ ತಜ್ಞರಾದ ಡಾ.ಕಾರ್ತಿಕ್, ಡಾ.ಸುಜಯ್ ರಿಂದ ತಪಾಸಣೆ ನಡೆಸಲಾಯಿತು. ಬಳಿಕ ತುರ್ತುಚಿಕಿತ್ಸಾ ಘಟಕದಲ್ಲಿ ತಪಾಸಣೆ ಮುಂದುವರಿದಿದೆ. ಇಸಿಜಿ, ಇಕೋ ಪರೀಕ್ಷೆ ನಾರ್ಮಲ್ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ.