ಶ್ರೀಮಂತರ ಆಸ್ತಿ ಬಡವರಿಗೆ ಮರು ಹಂಚಿಕೆ ಮಾಡಬೇಕು: ಚೇತನ್ ಅಹಿಂಸಾ

Krishnaveni K

ಶನಿವಾರ, 25 ಮೇ 2024 (09:41 IST)
ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಅಮೆರಿಕಾದಲ್ಲಿದ್ದಂತೇ ಭಾರತದಲ್ಲೂ ಪಿತ್ರಾರ್ಜಿತ ಆಸ್ತಿಗೆ ಸರ್ಕಾರ ಅರ್ಧದಷ್ಟು ಟ್ಯಾಕ್ಸ್ ಹಾಕಿ ಬಡವರಿಗೆ ನೀಡಬೇಕು ಎಂದಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದೀಗ ನಟ ಚೇತನ್ ಅಹಿಂಸಾ ಶ್ರೀಮಂತರ ಆಸ್ತಿಯನ್ನು ಸರ್ಕಾರ ವಶಪಡಿಸಿಕೊಂಡು ಬಡವರಿಗೆ ಹಂಚುವ ಕೆಲಸ ಮಾಡಬೇಕು ಎಂದಿದ್ದಾರೆ.

ಚಿಕ್ಕೋಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ಚೇತನ್ ಅಹಿಂಸಾ ಸರ್ಕಾರ ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ನೀಡಿರುವುದರ ವಿರುದ್ಧ ಕಿಡಿ ಕಾರಿದರು. ಮೊದಲು ಅಲೆಮಾರಿ ಜನಾಂಗದವರಿಗೆ ಸೂರು ಕಲ್ಪಿಸುವ ಕೆಲಸ ಮಾಡಲಿ.

ತಾನು ಅಹಿಂದ ಪರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅಹಿಂದ ಪರ ಕೆಲಸ ಮಾಡುತ್ತಿಲ್ಲ. ಅಹಿಂದ ಪರ ಕೆಲಸ ಮಾಡದೇ ಸೋಮಾರಿಯಾಗಿದ್ದಾರೆ. ಸರ್ಕಾರ ಮೊದಲು ಜಾತಿಗಣತಿ ಮಾಡಿ ಶ್ರೀಮಂತರ ಆಸ್ತಿಯನ್ನು ಬಡವರಿಗೆ ಹಂಚುವ ಕೆಲಸ ಮಾಡಬೇಕು ಎಂದಿದ್ದಾರೆ.

ಅವರ ಈ ಹೇಳಿಕೆ ನೆಟ್ಟಿಗರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಹಾಗಿದ್ದರೆ ಮೊದಲು ನಿಮ್ಮ ಆಸ್ತಿಯನ್ನು ಬಡವರಿಗೆ ಪಾಲು ಹಂಚಿ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಕಾಂಗ್ರೆಸ್ ಕೂಡಾ ತನ್ನ ಪ್ರಣಾಳಿಕೆಯಲ್ಲಿ ಪರೋಕ್ಷವಾಗಿ ಈ ವಿಚಾರ ಸೂಚಿಸಿರುವುದು ವಿರೋಧಕ್ಕೆ ಕಾರಣವಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ