ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆಸ್ಪತ್ರೆಗೆ ದಾಖಲು
ತುಷಾರ್ ಗಿರಿನಾಥ್ ಅವರು ಸಣ್ಣ ಪ್ರಮಾಣದ ಜ್ವರದಿಂದ ಬಳಲುತ್ತಿದ್ದರು. ಇದರ ಜೊತೆಗೆ ಕಳೆದ ಶನಿವಾರದಿಂದ ಹೊಟ್ಟೆ ನೋವು ಕಾಣಿಸಿಕೊಂಡಿತ್ತು.
ಪರಿಶೀಲನೆಗೆ ಒಳಪಡಿಸಿದಾಗ ಯೂರಿನರಿ ಇನ್ಫೆಕ್ಷನ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಮನೆಯಲ್ಲೇ ಔಷಧ ಹಾಗೂ ಇಂಜೆಕ್ಷನ್ ನೀಡಲಾಗಿತ್ತು. ಆದರೂ ಜ್ವರ ಕ್ಷೀಣಿಸದ ಕಾರಣ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತುಷಾರ್ ಗಿರಿನಾಥ್ ಆಪ್ತರು ಮಾಹಿತಿ ನೀಡಿದ್ದಾರೆ.