ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಬುಧವಾರ, 15 ಆಗಸ್ಟ್ 2018 (09:02 IST)
ಬೆಂಗಳೂರು : ಇಂದು ದೇಶದಾದ್ಯಂತ 72 ನೇ ಸ್ವಾತಂತ್ರೋತ್ಸವದ ಸಂಭ್ರಮ ಮನೆ ಮಾಡಿದೆ. ಸ್ವಾತಂತ್ರ ದಿನದ ಅಂಗವಾಗಿ ಸಿಎಂ ಕುಮಾರಸ್ವಾಮಿ ಅವರು ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೆರಿಸಿದರು.


ಧ್ವಜಾರೋಹಣದ ಬಳಿಕ ಸಿಎಂ ಕುಮಾರಸ್ವಾಮಿ ಅವರಿಗೆ  ಗೌರವ ವಂದನೆ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ,ಸೇನಾಪಡೆ, ಪೊಲೀಸ್, ಎನ್.ಸಿ.ಸಿ, ವಿವಿಧ ಶಾಲಾ ತುಕಡಿಗಳಿಂದ ಸಿಎಂ ಕುಮಾರಸ್ವಾಮಿ ಅವರು ಗೌರವ ಸ್ವೀಕಾರ ಮಾಡಲಿದ್ದಾರೆ. ನಂತರ ಆಕರ್ಷಕ ಪಥಸಂಚಲನ ನಡೆಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ