ಭಿನ್ನಮತ ಶಮನಕ್ಕೆ ಸಿಎಂ ಸಿದ್ದರಾಮಯ್ಯ ಕಸರತ್ತು: ನಿಗಮ, ಮಂಡಳಿಗಳ ಆಮಿಷ

ಶುಕ್ರವಾರ, 24 ಜೂನ್ 2016 (15:56 IST)
ಸಂಪುಟ ಪುನಾರಚನೆಯಿಂದ ಭುಗಿಲೆದ್ದ ಭಿನ್ನಮತವನ್ನು ಶಮನಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಸರತ್ತು ಆರಂಭಿಸಿದ್ದಾರೆ.
 
20 ಹಿರಿಯ ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿದ್ದು, ದಿಗ್ವಿಜಯ್ ಸಿಂಗ್ ಅವರೊಂದಿಗೆ ಚರ್ಚಿಸಿದ ನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
 
 20 ಹಿರಿಯ ಶಾಸಕರಿಗೆ ನಿಗಮ ಮಂಡಳಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನಿಸಲು ಸಿದ್ದತೆ ನಡೆದಿದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ನಿಗಮ, ಮಂಡಳಿಗಳ ನೇಮಕ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯತ್ನಕ್ಕೆ ಸೊಪ್ಪು ಹಾಕದ ಭಿನ್ನಮತೀಯ ಶಾಸಕರು ನಾಯಕತ್ವ ಬದಲಾವಣೆಯಾಗಬೇಕು ಎನ್ನುವ ಪಟ್ಟು ಹಿಡಿದಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ವಿ.ಶ್ರೀನಿವಾಸ್ ಪ್ರಸಾದ್, ಡಾ.ಮಲಕರೆಡ್ಡಿ ಸೇರಿದಂತೆ ಅನೇಕ ಶಾಸಕರು ಸಭೆ ಸೇರಿ ಮುಖ್ಯಮಂತ್ರಿ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.  
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ