ಬರಪೀಡಿತ ಬೀದರ್, ಕಲಬುರಗಿ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

ಶುಕ್ರವಾರ, 15 ಏಪ್ರಿಲ್ 2016 (12:09 IST)
ಬರಪೀಡಿತ ಜಿಲ್ಲೆಗಳಾದ ಬೀದರ್ ಮತ್ತು ಕಲಬುರ್ಗಿ ಜಿಲ್ಲೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದು, ಕುಡಿಯುವ ನೀರು ಸಮಸ್ಯೆ ಪರಿಹಾರ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಇಂದು ಬೆಳಿಗ್ಗೆ 10 ಗಂಟೆಗೆ ಬೀದರ್ ಜಿಲ್ಲೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ನಗರದಲ್ಲಿ ಕುಡಿಯು ನೀರಿನ ಸಮಸ್ಯೆ ಎದುರಿಸುತ್ತಿರುವ ಕೆಲ ಪ್ರದೇಶಗಳಿಗೆ ಭೇಟಿ ನೀಡಿದ್ದು, ನಂತರ ಜಿಲ್ಲೆಯ ಕೆಲ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
 
ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕಟ್ಟು ನಿಟ್ಟಿನ ಆದೇಶ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಸಭೆಯ ನಂತರ ರಸ್ತೆಯ ಮೂಲಕ ಕಲಬುರಗಿ ನಗರಕ್ಕೆ ತೆರಳಲಿರುವ ಸಿಎಂ ಸಿದ್ದರಾಮಯ್ಯ, ಜಿಲ್ಲೆಯ ಕೆಲ ಪಟ್ಟಣಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ