ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ನಿಯಮಗಳ ಬಗ್ಗೆ ಮಹತ್ವದ ಸಭೆ ನಡೆಯಲಿದೆ.
ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ತೀವ್ರತೆ ಹಾಗೂ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಸಂಖ್ಯೆ ಕಡಿಮೆ ಇದೆ. ಹಾಗಾಗಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಹಾಗೂ 50:50 ರೂಲ್ಸ್ ಮಾತ್ರ ಜಾರಿಯಲ್ಲಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ತಜ್ಞರು ಹಾಗೂ ಸಚಿವರ ಸಮ್ಮುಖದಲ್ಲಿ ಚರ್ಚೆ ನಡೆಸಿ ಕೋವಿಡ್ ನಿಯಮಗಳನ್ನು ಮತ್ತಷ್ಟು ಸಡಿಲಗೊಳಿಸುವ ಸಾಧ್ಯತೆ ಇದೆ. ಸೋಂಕು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಪುನಃ ತೆರೆಯುವುದರ ಕುರಿತು ಕೂಡ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಮಧ್ಯಾಹ್ನ ಸಿಎಂ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿ, ಮುಂದಿನ ದಿನಗಳಿಗೆ ಅಗತ್ಯವಿರುವ ಕೋವಿಡ್ ಮಾರ್ಗಸೂಚಿ ಕುರಿತು ಚರ್ಚಿಸಲಿದ್ದಾರೆ.
ಈ ವೇಳೆ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಸಚಿವರು, ಬಿಬಿಎಂಪಿ ಆಯುಕ್ತರು ಭಾಗಿಯಾಗಲಿದ್ದಾರೆ.