ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ
ಈ ಹಿಂದೆ ನಡೆದ ಅಪಘಾತದಲ್ಲಿ ಕಾಲು ಕಳೆದುಕೊಂಡ ಅವರಿಗೆ ಕೃತಕ ಕಾಲು ಜೋಡಣೆ ಮಾಡಲಾಗಿತ್ತು. ಕಾಲು ಕಳೆದುಕೊಂಡಾಗಿನಿಂದ ಕಾಂತರಾಜ್ ಮಾನಸಿಕ ಖಿನ್ನತೆಗೊಳಗಾಗಿದ್ದರು ಎಂದು ಹೇಳಲಾಗಿದೆ.
ಈ ನಡುವೆ ಕುಟುಂಬ ಸದಸ್ಯರು ಊರಿಗೆ ತೆರಳಿದ ವೇಳೆ ಕ್ವಾಟ್ರಸ್ ನಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಂತರಾಜ್ ಈ ಹಿಂದೆ ಎ.ಎನ್.ಎಫ್. ಹಾಗೂ ಕಳಸ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು ಎನ್ನಲಾಗಿದೆ.
ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.