ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥ

ಗುರುವಾರ, 20 ಡಿಸೆಂಬರ್ 2018 (18:58 IST)
ಮದ್ಯಾಹ್ನದ ಬಿಸಿಯೂಟ ಊಟ ಮಾಡಲು ಆ ಜಿಲ್ಲೆಯ ಸರಕಾರಿ ಶಾಲೆ ಮಕ್ಕಳು ಹಿಂದೇಟು ಹಾಕುತ್ತಿದ್ದಾರೆ. 

ಬಳ್ಳಾರಿ ಜಿಲ್ಲೆಯ ಸರ್ಕಾರಿ ಶಾಲೆ ಮಕ್ಕಳು ಬಿಸಿಯೂಟಕ್ಕೆ ಹಿಂದೇಟು ಹಾಕ್ತಿದ್ದಾರೆ.  ಕಾರಣ ಬಿಸಿಯೂಟ ಸೇವಿಸಿದ ಮಕ್ಕಳು ಅಸ್ವಸ್ಥರಾಗ್ತಾ ಇರೋ ಘಟನೆಗಳು ಒಂದಾದ ಮೇಲೊಂದರಂತೆ ನಡೀತಾ ಇವೆ. ಕಳೆದ ವಾರವಷ್ಟೇ ಹಗರಿಬೊಮ್ಮನಹಳ್ಳಿ ತಾಲೂಕಿನ‌ ಗದ್ದಿಕೇರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಉಂಡು 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದರು‌‌‌.

ಈಗ ಅಂತದ್ದೇ ಘಟನೆ  ಜಿಲ್ಲೆಯ ಸಿರುಗುಪ್ಪ ತಾಲೂಕಿನ ಆಗಲೂರಿನಲ್ಲಿ ನಡೆದಿದೆ. ಮದ್ಯಾಹ್ನ ಬಿಸಿಯೂಟ ಸೇವಿಸಿದ ಗ್ರಾಮದ ಪ್ರಾಥಮಿಕ ಶಾಲೆಯ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಶಿಕ್ಷಕರು ಅಸ್ವಸ್ಥಗೊಂಡ ಮಕ್ಕಳನ್ನು ಹತ್ತಿರದ ಕರೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಪಾಲಕರು ಶಾಲೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ