ಅರೇಬಿಕ್ ಶಾಲೆಗಳ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು: ನಾಗೇಶ್

ಶುಕ್ರವಾರ, 28 ಅಕ್ಟೋಬರ್ 2022 (09:45 IST)
ಮಡಿಕೇರಿ : ರಾಜ್ಯದಲ್ಲಿರುವ ಎಲ್ಲ ಅರೇಬಿಕ್ ಶಾಲೆಗಳ ಮಕ್ಕಳು ಬೇರೆ ಶಾಲೆಗಳ ಮಕ್ಕಳಂತೆ ಉತ್ತಮ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಅರೇಬಿಕ್ ಶಾಲೆಗಳ ಬೋಧನೆ ಕುರಿತು ವರದಿ ಕೇಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಮಡಿಕೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 106 ಅನುದಾನಿತ ಅರೇಬಿಕ್ ಶಾಲೆಗಳು ಇವೆ. 80 ಅನುದಾನ ರಹಿತ ಶಾಲೆಗಳಿವೆ. ಇಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮದ ಅನುಸಾರ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳಿವೆ. ಹೀಗಾಗಿ, ಈ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.

ಬೇರೆ ಅನುದಾನಿತ ಶಾಲೆಗಳ ರೀತಿಯಲ್ಲಿ ಅರೇಬಿಕ್ ಶಾಲೆಗಳು ಶಿಕ್ಷಣ ನೀಡಬೇಕು. ಆದರೆ, ಬಹಳಷ್ಟು ಶಾಲೆಗಳಲ್ಲಿ ಭಾಷೆ ಮತ್ತು ವಿಜ್ಞಾನದ ಕಲಿಕೆ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ