ಬೆಂಗಳೂರಿನಲ್ಲಿ ಪಟಾಕಿಯಿಂದ ಗಾಯಗೊಂಡ ಮಕ್ಕಳ ಸಂಖ್ಯೆ 25ಕ್ಕೇರಿಕೆ

ಶುಕ್ರವಾರ, 24 ಅಕ್ಟೋಬರ್ 2014 (11:18 IST)
ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿ  ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೂ ಗಾಯಗೊಂಡು ಆಸ್ಪತ್ರೆಗೆ ಸೇರಿದವರ ಮಕ್ಕಳ ಸಂಖ್ಯೆ 25ಕ್ಕೇರಿದೆ. ಒಟ್ಟು ನಾಲ್ಕು ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇಬ್ಬರು ಮಕ್ಕಳ ಎರಡೂ ಕಣ್ಣುಗಳಿಗೆ ಗಾಯವಾಗಿದ್ದು, ಸಂಪೂರ್ಣವಾಗಿ ಕಣ್ಣು ಕಳೆದುಕೊಳ್ಳುವ ಸಂಭವವಿದ್ದು, ಕತ್ತಲಿನ ಅಂಧಕಾರ ಕವಿಯುವ ಭಯ ಆವರಿಸಿದೆ.

ಮಿಂಟೋ ಆಸ್ಪತ್ರೆಯಲ್ಲಿ 6 ಮಂದಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣ ನೇತ್ರಾಲಯದಲ್ಲಿ 15 ಮಕ್ಕಳು ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಪಟಾಕಿ ಹೊಡೆಯುವುದನ್ನು ನೋಡುತ್ತಾ ನಿಂತಿರುವವರಿಗೆ ಮತ್ತು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಪಟಾಕಿ ಸಿಡಿದು ಕಣ್ಣಿಗೆ ಗಾಯವಾದರ ಸಂಖ್ಯೆ ಹೆಚ್ಚಿಗಿದೆ.

ಬೆಂಗಳೂರು ನೇತ್ರಾಲಯಲ್ಲಿ ಐದು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ವರ್ಷಕ್ಕಿಂತ ಈ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಪಟಾಕಿಯಿಂದ ಗಾಯಗೊಂಡ ಮಕ್ಕಳ ಸಂಖ್ಯೆ ಕಡಿಮೆಯಿದ್ದು ಕಳೆದ ವರ್ಷ 63 ಮಕ್ಕಳು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದರು. 

ವೆಬ್ದುನಿಯಾವನ್ನು ಓದಿ