ಚಿಲುಮೆ ಪ್ರಕರಣ : ಆರೋಪಿ ರವಿಕುಮಾರ್ ಬಂಧನ
ಇದೀಗ ಪ್ರಕರಣದ ಪ್ರಮುಖ ಆರೋಪಿ ರವಿಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ನಾಲ್ವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಇದೀಗ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಹಲಸೂರು ಗೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರಿಂದ ರೇಣುಕಪ್ರಸಾದ್, ಧರ್ಮೇಶ್ ಬೆನ್ನಲ್ಲೇ ಕಂಪನಿ ನಿರ್ದೇಶಕರಾದ ಕೆಂಪೇಗೌಡ, ಐಶ್ವರ್ಯರನ್ನು ಪೊಲೀಸ್ರು ಬಂಧಿಸಿದ್ರು.
ಇಂದು ಡಿಜಿಟಲ್ ಸಮೀಕ್ಷಾ ಆ್ಯಪ್ ಡೆವಲಪ್ ಮಾಡಿದ್ದ ಸಂಜೀವ್ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.