ಚೀನಾ ಡೇ ಆಚರಣೆ ರದ್ದುಗೊಳಿಸಿದ ಶಾಲೆ

ಗುರುವಾರ, 10 ಆಗಸ್ಟ್ 2017 (12:17 IST)
ಬೆಂಗಳೂರು: ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಬೆಂಗಳೂರಿನ ಡೆಲ್ಲಿ ಪಬ್ಲಿಕ್ ಶಾಲೆಯಲ್ಲಿ ಚೀನಾ ಡೇ ಆಚರಣೆಯನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

 
ಆಗಸ್ಟ್ 11 ರಂದು ಡೆಲ್ಲಿ ಪಬ್ಲಿಕ್ ಶಾಲೆಯಲ್ಲಿ ಚೀನಾ ಹೊಸ ವರ್ಷಾಚರಣೆ ಆಚರಿಸಲು ಸುತ್ತೋಲೆ ಹೊರಡಿಸಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಕ್ಷೇತ್ರ ಶಿಕ್ಷಣಾಧಿಕಾರಿ ನಾರಾಯಣ್ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದರು.

ಅಲ್ಲದೆ, ಇದರ ಬೆನ್ನಲ್ಲೇ ಶಾಲಾ ಆಡಳಿತ ಮಂಡಳಿ ಚೀನಾ ವರ್ಷಾಚರಣೆ ಕಾರ್ಯಕ್ರಮವನ್ನು ರದ್ದುಗೊಳಿಸಲು ತೀರ್ಮಾನಿಸಿದೆ. ನಂತರ ಈ ಬಗ್ಗೆ ಸ್ಪಷ್ಟನೆ ನೀಡಿದ ಶಾಲಾ ಆಡಳಿತ ಮಂಡಳಿ ನಾವು ಭಾರತೀಯರು. ನಮ್ಮ ದೇಶವನ್ನು ಅಪಾರವಾಗಿ ಗೌರವಿಸುತ್ತೇವೆ. ಇಲ್ಲಿನ ಸಂಸ್ಕೃತಿಗೆ ಅನುಗುಣವಾದ ಕಾರ್ಯಕ್ರಮಗಳನ್ನೂ ಆಯೋಜಿಸುತ್ತೇವೆ.

ಚೀನಾ ವರ್ಷಾಚರಣೆ ಕಾರ್ಯಕ್ರಮ ಒಂದು ವರ್ಷದ ಹಿಂದೆಯೇ ಆಯೋಜಿಸಿದ್ದೆವು. ನಮ್ಮ ಕೇಂದ್ರ ಶಾಖೆಯ ಸೂಚನೆಯಂತೆ ನಡೆಸಲು ಉದ್ದೇಶಿಸಿದ್ದೆವು.  ಈಗ ಎಲ್ಲಾ ಕಾರ್ಯಕ್ರಮಗಳನ್ನೂ ರದ್ದುಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ… ಭಾರತ-ಚೀನಾ ನಡುವೆ ಯುದ್ಧ ಭೀತಿ? ಸನ್ನದ್ಧವಾಗಿದೆಯಾ ಭಾರತೀಯ ಸೇನೆ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ