ಚಿನ್ನಸ್ವಾಮಿ ಸ್ಟೇಡಿಯಂ ಬಾಂಬ್ ಸ್ಫೋಟ: ಯಾಸಿನ್ ಭಟ್ಕಳ ಹಾಜರಾತಿಗೆ ಕೋರ್ಟ್ ಆದೇಶ

ಮಂಗಳವಾರ, 17 ಜನವರಿ 2017 (19:37 IST)
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಮದ ಪ್ರಮುಖ ಆರೋಪಿಯಾದ ಭಯೋತ್ಪಾದಕ ಯಾಸಿನ್ ಭಟ್ಕಳನನ್ನು ಫೆಬ್ರವರಿ 4 ರಂದು ಹಾಜರುಪಡಿಸುವಂತೆ ಕೋರ್ಟ್ ಆದೇಶ ನೀಡಿದೆ. 
 
2010 ಏಪ್ರಿಲ್ 4 ರಂದು ಐಪಿಎಲ್ ಪಂದ್ಯ ನಡೆಯುತ್ತಿರುವ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನ 11 ಮತ್ತು 15 ನೇ ಗೇಟ್‌ನಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಈ ಪ್ರಕರಣದ ತನಿಖೆ ನಡೆಸಿದ ಎಸಿಪಿ ನ್ಯಾಮಗೌಡ ಅವರು 14 ಜನರ ವಿರುದ್ಧ ಜಾರ್ಜ್‌ಶೀಟ್ ಸಲ್ಲಿಸಿದ್ದರು. 
 
52 ನೇ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಮಾಹವರ್ತರ ಅವರು ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಯಾಸಿನ್ ಭಟ್ಕಳನನ್ನು ಫೆ.4 ಕ್ಕೆ ನ್ಯಾಯಾಲಯಕ್ಕೆ ಹಾಜರು ಪಡೆಸುವಂತೆ ಆದೇಶ ನೀಡಿದ್ದಾರೆ. 
 
ಸದ್ಯ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಇಂಡಿಯನ್ ಮುಜಾಯಿದ್ದೀನ್ ಉಗ್ರ ಸಂಘಟನೆಯ ಸಂಸ್ಥಾಪಕ ಯಾಶಿನ್ ಭಟ್ಕಳ ಚರಲಪಲ್ಲಿ ಜೈಲಿನಲ್ಲಿ ಶಿಕ್ಷೆ ಅನುಭವಿಸಿತ್ತಿದ್ದಾನೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ