ಚಿತ್ತೂರು ಎನ್‌ಕೌಂಟರ್ ಪ್ರಕರಣ: ಆಂಧ್ರ ಸರ್ಕಾರದಿಂದ ವರದಿ ಕೇಳಿದ ಕೇಂದ್ರ

ಬುಧವಾರ, 8 ಏಪ್ರಿಲ್ 2015 (14:22 IST)
ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ರಾಜ್ಯ ಪೊಲೀಸರು ನಡೆಸಿದ ಎನ್‌ಕೌಂಟರ್ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ವರದಿ ರೂಪದಲ್ಲಿ ಒಪ್ಪಿಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಇಂದು ಸೂಚಿಸಿದ್ದಾರೆ. 
 
ದೂರವಾಣಿ ಮೂಲಕ ಪ್ರತಿಕ್ರಿಯಿಸಿರುವ ಚಂದ್ರಬಾಬು ನಾಯ್ಡು ಅವರು, ಪ್ರಕರಣದ ಸಂಪೂರ್ಣ ಮಾಹಿತಿಯನ್ನು ವರದಿ ರೂಪದಲ್ಲಿ ಒಪ್ಪಿಸುವಂತೆ ಮುಖ್ಯಮಂತ್ರಿ ನಾಯ್ಡು ಅವರಿಗೆ ತಿಳಿಸಿದ್ದಾರೆ ಎಂಬುದಾಗಿ ವಿಶ್ವಾಸನೀಯ ಮೂಲಗಳು ತಿಳಿಸಿವೆ.  
 
ಅಕ್ರಮವಾಗಿ ರಕ್ತ ಚಂದನವನ್ನು ಸಾಗಿಸುತ್ತಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಸ್ಪೆಷಲ್ ಟಾಸ್ಕ್ ಸಿಬ್ಬಂದಿಗಳು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಶೇಷಾಚಲಂ ಹಾಗೂ ಶ್ರೀವಾರಿ ಎಂಬ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದರು. ಈ ಕಾರ್ಯಚರಣೆಯು ಉದ್ವಿಘ್ನ ಪರಿಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಪೊಲೀಸರು ಎನ್‌ಕೌಂಟರ್‌ಗೆ ಮುಂದಾದರು. ಪರಿಣಾಮ ಘಟನೆಯಲ್ಲಿ 20 ಮಂದಿ ಮರಸಾಗಣೆ ಮಾಡುತ್ತಿದ್ದ ಕಳ್ಳರು ಬಲಿಯಾಗಿದ್ದರು. ಸಾವನ್ನಪ್ಪಿದ ಎಲ್ಲಾ ಸ್ಮಗ್ಲರ್ಸ್ ಕೂಡ ತಮಿಳುನಾಡು ಮೂಲದವರು ಎನ್ನಲಾಗುತ್ತಿದ್ದು, ಪ್ರಕರಣ ಸಂಬಂಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಂಪೂರ್ಣ ವರದಿ ಕೇಳಿದ್ದಾರೆ. 

ವೆಬ್ದುನಿಯಾವನ್ನು ಓದಿ