ರಾಯಚೂರು : ಗಾಂಜಾ ಚಾಕೊಲೇಟ್ ದಂಧೆ ಭೇದಿಸಿದಷ್ಟು ಬಯಲಾಗುತ್ತಿದೆ. ಆಯುರ್ವೇದ ಔಷಧಿ ಹೆಸರಿನಲ್ಲಿ ಗಾಂಜಾ ಚಾಕೊಲೇಟ್ ಮಾರುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಎರಡು ಪ್ರತ್ಯೇಕ ಕಡೆ ಪೊಲೀಸ್ ದಾಳಿ ಹಿನ್ನೆಲೆ ಎರಡು ಪ್ರಕರಣಗಳು ದಾಖಲಾಗಿದ್ದು, ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಗಾಂಜಾ ಚಾಕೊಲೇಟ್ ಮಕ್ಕಳ ಕೈಗೆ ಸಿಗದಂತೆ ಎಚ್ಚರವಹಿಸಿ ಎಂದು ಪೋಷಕರು ಹಾಗೂ ಕಾಲೇಜು ಆಡಳಿತ ಮಂಡಳಿಗಳಿಗೆ ಸೂಚಿಸಿದ್ದಾರೆ.
ಎರಡು ಪ್ರಕರಣಗಳಿಂದ 7 ಕೆಜಿ ಮೌಲ್ಯದ 1,410 ಗಾಂಜಾ ಚಾಕೊಲೇಟ್ಗಳನ್ನ ಜಪ್ತಿ ಮಾಡಲಾಗಿದೆ. ಬಿಹಹಾರ ಮೂಲದ ಕಿಂಗ್ ಪಿನ್ ಸಂದೀಪ್, ರಾಯಚೂರು ಮೂಲದ ಕಿಂಗ್ ಪಿನ್ ವಾಜೀದ್ ಹಾಗೂ ರಾಮಕೃಷ್ಣ ಸೇರಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಕಿರಾಣಿ ಅಂಗಡಿಗಳು, ಹೋಟೆಲ್ಗಳು ಹಾಗೂ ಪಾನ್ ಶಾಪ್ಗಳಲ್ಲಿ ದಂಧೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಸದರ್ ಬಜಾರ್ ಹಾಗೂ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ.