ಚರ್ಚ್ ದಾಳಿ: ಸರಕಾರದಿಂದ ನ್ಯಾ.ಸೋಮಶೇಖರ್ ಆಯೋಗದ ವರದಿ ತಿರಸ್ಕಾರ

ಗುರುವಾರ, 16 ಅಕ್ಟೋಬರ್ 2014 (15:22 IST)
2008ರಲ್ಲಿ ನಡೆದಿದ್ದ ಚರ್ಚ್ ದಾಳಿಗಳಿಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ನ್ಯಾ.ಸೋಮಶೇಖರ್ ಆಯೋಗದ ವರದಿ ಸ್ಪಷ್ಟವಾಗಿಲ್ಲವಾದ್ದರಿಂದ ವರದಿಯನ್ನು ಸರಕಾರ ತಿರಸ್ಕರಿಸಿದೆ ಎಂದು  ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
 
ಆಯೋಗದ ಮಧ್ಯಂತರ ವರದಿಯಲ್ಲಿ ಭಜರಂಗದಳದ ಪಾತ್ರವಿದೆ ಎಂದು ಆರೋಪಿಸಲಾಗಿತ್ತು. ಆದರೆ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸಲ್ಲಿಸಿದ ಅಂತಿಮ ವರದಿಯಲ್ಲಿ ಭಜರಂಗದಳದ ಪಾತ್ರವಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿರುವುದು ಅನುಮಾನ ಮೂಡಿಸಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
 
ನ್ಯಾಯಮೂರ್ತಿ ಸೋಮಶೇಖರ್ ನೇತೃತ್ವದ ವರದಿಯನ್ನು ಗೃಹ ಇಲಾಖೆಗೆ ವರ್ಗಾಯಿಸಬೇಕು ಎಂದು ರಾಜ್ಯ ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿದೆ.
 
ವರದಿ ತಿರಸ್ಕಾರಕ್ಕೂ ಹಿಂದು ಸಂಘಟನೆಗಳಿಗೂ ಯಾವುದೇ ಸಂಬಂಧವಿಲ್ಲ. ವರದಿಯಲ್ಲಿ ದೋಷಗಳಿದ್ದವು. ಬಿಜೆಪಿ ಸರಕಾರದ ಒತ್ತಡಕ್ಕೆ ಮಣಿದು ವರದಿ ಸಲ್ಲಿಸಿದ್ದರಿಂದ ಪ್ರಾಮಾಣಿಕ ತನಿಖೆಗಾಗಿ ಗೃಹ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ಸಚಿವ ಜಯಚಂದ್ರ ತಿಳಿಸಿದ್ದಾರೆ. 
 

ವೆಬ್ದುನಿಯಾವನ್ನು ಓದಿ