18 ದಿನ ದಿವ್ಯಾ ಹಾಗರಗಿ ಎಲ್ಲಿದ್ದಿದ್ದು ಗೊತ್ತಾ? ನೆರವು ನೀಡಿದ್ದ ಉದ್ಯಮಿ ಅರೆಸ್ಟ್!
ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಆರೋಪ ಹೊತ್ತಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಜೊತೆ ನಾಲ್ವರನ್ನು ಸಿಐಡಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದಾರೆ.
ಬುಧವಾರ ರಾತ್ರಿ ಪುಣೆಯ ಹೋಟೆಲ್ ವೊಂದರಲ್ಲಿ ಊಟ ಮಾಡುತ್ತಿದ್ದ ದಿವ್ಯಾ ಹಾಗರಗಿ ಅವರನ್ನು ಪೊಲೀಸರು ಬಂಧಿಸಿದ್ದು, ಪೊಲೀಸರ ಆಗಮನ ನೋಡಿ ಸ್ವತಃ ದಿವ್ಯಾ ಹಾಗರಗಿ ಶಾಕ್ ಆಗಿದ್ದಾರೆ ಎನ್ನಲಾಗಿದೆ.
ಪರೀಕ್ಷಾ ಅಕ್ರಮ ನಡೆಸಿದ ದಿವ್ಯಾ ಹಾಗರಗಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿದ ಪೊಲೀಸರು ದಿವ್ಯಾ ಹಾಗರಗಿಗೆ ಸಹಕರಿಸುತ್ತಿದ್ದ ಮಹಾರಾಷ್ಟ್ರ ಮೂಲದ ಉದ್ಯಮಿಯ ಬೆನ್ನು ಹತ್ತಿದ್ದು, ಆತ ಜಾಡು ಹಿಡಿದು ದಿವ್ಯಾರನ್ನು ಬಂಧಿಸಲಾಗಿದೆ.
ಸೋಲಾಪುರದಲ್ಲಿ ಪ್ರಮುಖ ಉದ್ಯಮಿಯಾಗಿರುವ ಸುರೇಶ್ ಕಟ್ಗೋನ್ ದಿವ್ಯಾ ತಲೆಮರೆಸಿಕೊಳ್ಳಲು ಆಶ್ರಯ ನೀಡಿದ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.