105 ಶಾಸಕರಿಂದ ಸರ್ಕಾರ ರಚಿಸುವ ವಿಶ್ವಾಸವಿದ್ದರೆ ರಾಜ್ಯಪಾಲರ ಮುಂದೆ ಹಕ್ಕು ಮಂಡಿಸಿ- ಶೋಭಾ ಕರಂದ್ಲಾಜೆಗೆ ಸಿದ್ದರಾಮಯ್ಯ ತಿರುಗೇಟು

ಬುಧವಾರ, 3 ಜುಲೈ 2019 (09:33 IST)
ಬೆಂಗಳೂರು : ಮೈತ್ರಿ ಸರ್ಕಾರದ ವಿರುದ್ಧ ಟ್ವೀಟರ್ ನಲ್ಲಿ  ಹರಿಹಾಯ್ದ ಸಂಸದೆ ಶೋಭಾ ಕರಂದ್ಲಾಜೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.



ಶೋಭಾ ಕರಂದ್ಲಾಜೆ, 78ಕ್ಕಿಂತ 105 ದೊಡ್ಡದು. ರಾಜ್ಯದ ಜನತೆ ಬಿಜೆಪಿ ಪರ ತೀರ್ಪು ಕೊಟ್ಟರೂ ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿಯಿಂದ ಸರ್ಕಾರ ರಚಿಸಿದೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಕಾಮನ್‍ಸೆನ್ಸ್ ಇಲ್ಲವಾಯಿತೆ? ಆರಂಭದಿಂದಲೇ ಶಾಸಕರ ಗುಂಪು ಮಾಡಿಕೊಂಡು ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದೀರಿ. ನಿಮ್ಮ ನೀಚ್ ಪಾಲಿಟಿಕ್ಸ್ ಬಿಟ್ಟು ಬಿಡಿ. ಸಮ್ಮಿಶ್ರ ಸರ್ಕಾರದ ವಿಫಲತೆಗೆ ಬಿಜೆಪಿ ದೂರುವುದನ್ನು ಬಿಟ್ಟುಬಿಡಿ ಎಂದು ಟ್ವೀಟ್ ಮಾಡಿದ್ದರು.

 

ಈ ಟ್ವೀಟ್ ಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಕೇವಲ 105 ಶಾಸಕರಿಂದ ಸರ್ಕಾರ ರಚಿಸಬಹುದು ಎನ್ನುವ ವಿಶ್ವಾಸ ನಿಮಗಿದ್ದರೆ ರಾಜ್ಯಪಾಲರ ಮುಂದೆ ಹಕ್ಕು ಮಂಡಿಸಿ. ಅವರು ಒಪ್ಪಿದರೆ ನಾವಾಗಿಯೇ ಸರ್ಕಾರದಿಂದ ಹೊರಹೋಗುತ್ತೇವೆ. 105ಕ್ಕಿಂತ 113 ದೊಡ್ಡದು ಎಂಬುದು ನನ್ನ ತಿಳುವಳಿಕೆ. ಕರ್ನಾಟಕ ವಿಧಾನಸಭೆಯಲ್ಲಿ 113 ಶಾಸಕರ ಬೆಂಬಲವಿದ್ದರೆ ಯಾರೂ ಬೇಕಾದರೂ ಸರ್ಕಾರ ರಚನೆ ಮಾಡಬಹುದು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ