ಧರ್ಮ ವಿಚಾರದಲ್ಲಿ ಬಿಜೆಪಿ ತಾರತಮ್ಯ ಮಾಡಿದೆ ಸಿಎಂ ಆರೋಪ..!
ರಾಜ್ಯ ಸರ್ಕಾರ ಇವತ್ತು ಮತ್ತೆ ಬಿಜೆಪಿಗೆ ತಿರುಗೇಟು ನೀಡಿದೆ. ಬಿಜೆಪಿ ಸರ್ಕಾರ ಇದ್ದಾಗ ಕೋಮುಗಲಭೆಯಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಪರಿಹಾರದ ಚೆಕ್ ನೀಡಿ ಸರ್ಕಾರಿ ಕೆಲಸದ ನೀಡುವ ಭರವಸೆಯನ್ನ ನೀಡಿ ನಾವು ಎಲ್ಲಾ ಧರ್ಮದ ಪರ ಇದ್ದೇವೆ ಎಂಬ ಸಂದೇಶವನ್ನ ರವಾನಿಸಿದ್ರು. ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತ್ತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಅಂತ ಬಿಜೆಪಿಗೆ ತಿರುಗೇಟು ನೀಡಿದ್ರು.