ಕೊಡಗು ಹಿಂಸಾಚಾರ: ಮೃತ ಕುಟ್ಟಪ್ಪ ಕುಟುಂಬಕ್ಕೆ 5 ಲಕ್ಷ ಪರಿಹಾರ

ಬುಧವಾರ, 11 ನವೆಂಬರ್ 2015 (13:41 IST)
ಮಡಿಕೇರಿಯಲ್ಲಿ ನಿನ್ನೆ ನಡೆದ ಘರ್ಷಣೆ ಸಂದರ್ಭದಲ್ಲಿ ಮೃತಪಟ್ಟ ವಿಹೆಚ್‌ಪಿ ಮುಖಂಡ ಕುಟ್ಟಪ್ಪ ಅವರ ಕುಟುಂಬಕ್ಕೆ ಸಿಎಂ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಇದರ ಜತೆಗೆ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಾವಿನ ಕುರಿತು ತನಿಖೆಗೂ ಆದೇಶಿಸಿದ್ದಾರೆ. 
 
ಅತ್ತ ಮೃತ ಕುಟ್ಟಪ್ಪ ಅವರ ಅಂತ್ಯಸಂಸ್ಕಾರಕ್ಕೆ ತಯಾರಿ ನಡೆಸಲಾಗುತ್ತಿದ್ದು ಅವರು ಶವವನ್ನು ನಿವಾಸದಲ್ಲಿ ಅಂತಿನ ದರ್ಶನಕ್ಕೆ ಇಡಲಾಗಿದೆ. ಅಲ್ಲಿಗೆ ಭೇಟಿ ನೀಡಿರುವ ರಾಜ್ಯ ಬಿಜೆಪಿ ಮುಖಂಡರಾದ ಶೋಭಾಕರಂದ್ಲಾಜೆ, ಪ್ರಹ್ಲಾದ್ ಜೋಶಿ, ಸಿಟಿ ರವಿ ಮತ್ತಿತರರು ಕುಟ್ಟಪ್ಪ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. 
 
ವಿಹೆಚ್‍ಪಿ ಮುಖಂಡ ಕುಟ್ಟಪ್ಪ ಹತ್ಯೆ ಖಂಡಿಸಿ ಇಂದು ಕೊಡಗು ಬಂದ್‌ಗೆ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಕರೆ ನೀಡಿದೆ. ಬಂದ್ ಹಿನ್ನಲೆಯಲ್ಲಿ ಮುನ್ನಚ್ಚರಿಕೆಯ ಕ್ರಮವಾಗಿ ಕೊಡಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಖಾಸಗಿ ಬಸ್ ಮಾಲಿಕರ ಸಂಘ ಬಂದ್‌ಗೆ ಬೆಂಬಲ ಸೂಚಿಸಿದ್ದು ಖಾಸಗಿ ಮತ್ತು ಸರ್ಕಾರಿ ಬಸ್‌ಗಳು ಇಂದು ಸಹ ರಸ್ತೆಗಿಳಿದಿಲ್ಲ. ಮಡಿಕೇರಿಯಲ್ಲಿ 144ನೇ ಸೆಕ್ಷನ್ ಜಾರಿಯನ್ನು ಮುಂದುವರೆಸಲಾಗಿದೆ.

ವೆಬ್ದುನಿಯಾವನ್ನು ಓದಿ