ರಾಜಧಾನಿ ಅಭಿವೃದ್ಧಿಗೆ ಸಿಎಂ ಒತ್ತು

ಶುಕ್ರವಾರ, 4 ಮಾರ್ಚ್ 2022 (15:02 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್​ ಮಂಡನೆ ಮಾಡುತ್ತಿದ್ದಾರೆ. ಇದರಲ್ಲಿ ಕೃಷಿ ಮತ್ತು ಕೃಷಿ ಪೂರಕ ಚಟುವಟಿಕೆಗೆ 33,700 ಕೋಟಿ ರೂಪಾಯಿ ಬಜೆಟ್​​ನಲ್ಲಿ ತೆಗೆದಿರಿಸಲಾಗಿದೆ.
ಆರ್ಥಿಕ ಅಭಿವೃದ್ಧಿ ಉತ್ತೇಜನಕ್ಕೆ 55, 657 ಕೋಟಿ ರೂಪಾಯಿ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂಪಾಯಿ . ಸಂಸ್ಕೃತಿ ಪರಂಪರೆ, ನೈಸರ್ಗಿಕ ಸಂಪನ್ಮೂಲ ರಕ್ಷಣೆಗೆ 3,102 ಕೋಟಿ ರೂಪಾಯಿ ಅನುದಾನ ತೆಗೆದಿರಿಸಲಾಗಿದೆ.
 
ಆಡಳಿತ ಸುಧಾರಣೆ, ಸಾರ್ವಜನಿಕ ಸೇವೆಗೆ ₹ 56,710 ಕೋಟಿ ನಿಗದಿಪಡಿಸಲಾಗಿದೆ. ಮಹಿಳಾ ಸಬಲೀಕರಣ ಕ್ಷೇಮಾಭಿವೃದ್ಧಿಗೆ ₹ 43,188 ಕೋಟಿ ನೀಡಲಾಗಿದೆ. ಮಕ್ಕಳ ಅಭ್ಯುದಯಕ್ಕೆ 40,944 ಕೋಟಿ ರೂಪಾಯಿ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಗೃಹ ಯೋಜನೆಗಾಗಿ 2ನೇ ಹಂತದಲ್ಲಿ 250 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಮೊಬಿಲಿಟಿ ಯೋಜನೆಗೆ 50 ಕೋಟಿ ರೂ. ಅನುದಾನ ತೆಗೆದಿರಿಸಲಾಗಿದೆ.
 
ರಾಜ್ಯದಲ್ಲಿ ನೂತನ ಕೆಎಸ್​ಆರ್​ಪಿ (KSRP) ಮಹಿಳಾ ಕಂಪನಿ ಆರಂಭಕ್ಕೆ ಅಸ್ತು ಅನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ವಿಮಾನ ಮೊತ್ತ ಹೆಚ್ಚಳ ಮಾಡಲಾಗಿದೆ. 1 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.
 
ದಾವಣಗೆರೆಯಲ್ಲಿ SDRF ಆರಂಭಕ್ಕೆ ಅಂಕಿತ ಹಾಕಲಾಗಿದೆ. ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ ನೀಡುತ್ತೇವೆ. ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಮಾಡಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ