ಸಿಎಂ ಆದ ಖುಷಿಗೆ ಪುನೀತ್ ಹಾಡಿಗೆ ಹೆಜ್ಜೆ ಹಾಕಿದ ಬಸವರಾಜ ಬೊಮ್ಮಾಯಿ

ಗುರುವಾರ, 29 ಜುಲೈ 2021 (10:09 IST)
ಬೆಂಗಳೂರು: ನೂತನವಾಗಿ ಮುಖ್ಯಮಂತ್ರಿಯಾಗಿ ಬಿಜೆಪಿ ಹೈಕಮಾಂಡ್ ತಮ್ಮ ಹೆಸರನ್ನು ಘೋಷಣೆ ಮಾಡಿದ ಖುಷಿಯಲ್ಲಿ ಬಸವರಾಜ ಬೊಮ್ಮಾಯಿ ಕುಟುಂಬಸ್ಥರೊಂದಿಗೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ.


ಪುನೀತ್ ರಾಜ್ ಕುಮಾರ್ ಅಭಿನಯದ ರಾಜಕುಮಾರ ಸಿನಿಮಾದ ಬೊಂಬೆ ಹೇಳುತೈತೆ ಹಾಡಿಗೆ ಕುಟುಂಬಸ್ಥರೊಂದಿಗೆ ಹೆಜ್ಜೆ ಹಾಕಿ ಸಿಎಂ ಬೊಮ್ಮಾಯಿ ಖುಷಿಪಟ್ಟ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪತ್ನಿ ಜೊತೆ ಕುಳಿತು ಮಕ್ಕಳೊಂದಿಗೆ ತಮ್ಮ ಮನೆಯಲ್ಲಿ ಮೊನ್ನೆ ರಾತ್ರಿ ಈ ಹಾಡನ್ನು ಕೇಳಿ ಎಂಜಾಯ್ ಮಾಡುತ್ತಿರುವ ಕ್ಷಣಗಳು ಈಗ ಎಲ್ಲೆಡೆ ಹರಿದಾಡುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ