ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪುರಾಣ ಪ್ರಸಿದ್ಧ ಅಂಜನಾದ್ರಿಯಲ್ಲಿರುವ ಆಂಜನೇಯ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಭೂಮಿ ಪೂಜೆ ನೆರವೇರಿಸಿದರು. ಅಂಜನಾದ್ರಿ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 120 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ, ಕ್ಷೇತ್ರದಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ, ಯಾತ್ರಿ ನಿವಾಸ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಭೂಮಿ ಪೂಜೆ ನೆರವೇರಿಸಿದರು. ಅಂಜನಾದ್ರಿ ಪರ್ವತದ ಆಂಜನೇಯನ ಮೂರ್ತಿಗೆ ಸಿಎಂ ಬೊಮ್ಮಾಯಿ ಪೂಜೆ ಸಲ್ಲಿಸಿದರು. ಸಚಿವ ಆನಂದಸಿಂಗ್, ಸಚಿವ ಹಾಲಪ್ಪ ಆಚಾರ್, ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮುನವಳ್ಳಿ, ಸಚಿವ ಮುನಿರತ್ನ ಸಿಎಂಗೆ ಸಾಥ್ ನೀಡಿದರು.