ರೂಪಾ, ರೋಹಿಣಿ ನಡೆಗೆ ಸಿಎಂ ಬೊಮ್ಮಾಯಿ ಗರಂ

ಸೋಮವಾರ, 20 ಫೆಬ್ರವರಿ 2023 (14:36 IST)
ರಾಜ್ಯದಲ್ಲಿ ಐಪಿಎಸ್, ಐಎಎಸ್ ಮಹಿಳಾ ಅಧಿಕಾರಿಗಳ ಮಧ್ಯೆ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಅಧಿಕಾರಿಗಳ ಕಿತ್ತಾಟಕ್ಕೆ ಬ್ರೇಕ್​ ಹಾಕುಲು ಸರ್ಕಾರ ಮಧ್ಯೆ ಪ್ರವೇಶ ಮಾಡಿದೆ. ಈ ಬಗ್ಗೆ ಬೊಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ವೈಯಕ್ತಿಕವಾಗಿ ಇವರಿಬ್ಬರಿಗೆ ಭಿನ್ನಾಭಿಪ್ರಾಯಗಳಿದ್ದರೆ ಏನಾದರೂ ಮಾಡಿಕೊಳ್ಳಲಿ, ಅಥವಾ ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಬೇಕಾಗಿತ್ತು. ಆದರೆ ಈ ರೀತಿ ಸಾರ್ವಜನಿಕವಾಗಿ ಕಿತ್ತಾಡಿಕೊಳ್ಳುವುದು ಸರಿಯಲ್ಲ, ಇದನ್ನು ನೋಡಿಕೊಂಡು ಸರ್ಕಾರ ಸುಮ್ಮನೆ ಕೂರುವುದಿಲ್ಲ, ಇಬ್ಬರಿಗೂ ನೊಟೀಸ್ ಜಾರಿ ಮಾಡಲಾಗುವುದು ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ