ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ

ಬುಧವಾರ, 15 ಮಾರ್ಚ್ 2023 (19:42 IST)
ರಾಜ್ಯದ ಗಡಿ ಭಾಗಕ್ಕೆ ಮಹಾರಾಷ್ಟ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದರೆ ನಾನ್ಯಾಕೆ ರಾಜೀನಾಮೆ ಕೊಡಬೇಕು ? ನಾನು ಡಿ.ಕೆ. ಶಿವಕುಮಾರ್ ಅವರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಗಡಿ ಗ್ರಾಮಗಳಿಗೆ ಮಹಾರಾಷ್ಟ್ರ ಸರ್ಕಾರ 54 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿಎಂ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ನಾವು ಕೂಡ ಮಹಾರಾಷ್ಟ್ರದಲ್ಲಿರುವ ಪಂಡರಾಪುರ, ತುಳಜಾಪುರಕ್ಕೆ ಹೋಗುವ ಕರ್ನಾಟಕದವರಿಗೆ ಹಣ ಬಿಡುಗಡೆ ಮಾಡುತ್ತೇವೆ. ಮಹಾರಾಷ್ಟ್ರ ಸರ್ಕಾರದವರು ಯಾವ ಅನುದಾನ ಬಿಡುಗಡೆ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇವೆ. ಮಹಾರಾಷ್ಟ್ರ ಹಸ್ತಕ್ಷೇಪವನ್ನು ಯಾವ ರೀತಿ ತಡೆಯಬೇಕು ಎಂಬುದನ್ನು ಪರಾಮರ್ಶೆ ಮಾಡುತ್ತೇವೆ.ನೆಲ , ಜಲ, ಭಾಷೆ, ಗಡಿ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಕಾಂಗ್ರೆಸ್ ನಾಯಕರು ಅನಗತ್ಯವಾಗಿ ರಾಜ್ಯದ ಜನರಲ್ಲಿ ಗೊಂದಲ ಉಂಟುಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ